ಬುಧವಾರ, ಆಗಸ್ಟ್ 10, 2022
21 °C

ಹರಲೀಪುರ: ಕೆರೆ ಅಭಿವೃದ್ಧಿ ಕಾಮಗಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಾಪಟ್ಟಣ: ಸಮೀಪದ ಹರಲೀಪುರದ ಕೆರೆಯನ್ನು ಉದ್ಯೋಗ ಖಾತ್ರಿ ಯೋಜನೆಯಲ್ಲಿ ₹ 40 ಲಕ್ಷ ವೆಚ್ಚದಲ್ಲಿ ಪುನರ್‌ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್‌. ಪ್ರಕಾಶ್‌ ತಿಳಿಸಿದರು.

ಮಂಗಳವಾರ ಕೆರೆಯ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು.

ಸಮಗ್ರ ಕೆರೆ ಅಭಿವೃದ್ಧಿ ಯೋಜನೆಯಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಕೆರೆ ಏರಿಯ ರಿವಿಟ್‌ಮೆಂಟ್‌ ಕಾಮಗಾರಿ ಅರ್ಧದಷ್ಟು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಮತ್ತೆ ₹ 20 ಲಕ್ಷವನ್ನು ಬಿಡುಗಡೆ ಮಾಡಲಾಗಿದೆ. ಈ ಕೆರೆಯ ಪುನಶ್ಚೇತನದಿಂದ ಹರಲೀಪುರ ಸೇರಿ ಇತರ ಗ್ರಾಮಗಳ ಜನತೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಈಶ್ವರ್‌, ‘ಕಾಮಗಾರಿ ಪೂರ್ಣಗೊಂಡ ನಂತರ ನೀರು ಭರ್ತಿಯಾಗಿ, ನೀರಾವರಿ, ಅಂತರ್ಜಲದ ಹೆಚ್ಚಳ, ಜನ ಜಾನುವಾರುಗಳಿಗೆ , ಯಾತ್ರಿಕರಿಗೆ ಮತ್ತು ಕಾಡು ಪ್ರಾಣಿಗಳಿಗೆ ಕುಡಿಯುವ ನೀರು ದೊರೆಯಲಿದೆ. ಉಳಿದ ಕಾಮಗಾರಿ ಶೀಘ್ರ ಆರಂಭವಾಗಲಿದೆ’ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಮೂರ್ತಿ, ಧರ್ಮೇಗೌಡ, ಹೇಮಾಕ್ಷಿ ರವಿಕುಮಾರ್‌, ಪಿಡಿಒ ಆನಂದನಾಯ್ಕ್‌, ನರೇಗಾ ಸಹಾಯಕ ಎಂಜಿನಿಯರ್‌ ರವಿ ಪಾಟೀಲ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು