ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ದಾವಣಗೆರೆ: ಕೊರೊನಾ ಸೋಂಕಿನಿಂದ ಶಾಲೆಗಳು ತೆರೆಯದೇ ಮಕ್ಕಳ ಶಿಕ್ಷಣ ಕುಂಠಿತಗೊಂಡಿದೆ. ಶಿಕ್ಷಕರು ಪಠ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ನಗರದ ಕೆ.ಆರ್. ಮಾರುಕಟ್ಟೆ ಮತ್ತು ಮಾಜಿ ಪುರಸಭೆ ಸರ್ಕಾರಿ ಪ್ರೌಢಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಎರಡು ವರ್ಷಗಳಿಂದ ಕೊರೊನಾದಿಂದಾಗಿ ಮಕ್ಕು ಮನೆಯಲ್ಲಿ ಉಳಿಯುವಂತಾಯಿತು. ಉತ್ತಮ ಶಿಕ್ಷಣ ಪಡೆದರೆ ಮಾತ್ರ ದೇಶದ ಉತ್ತಮ ಪ್ರಜೆಯಾಗಲು ಸಾಧ್ಯ. ಆ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೊಟ್ರೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಕೆ.ಆರ್. ಮಾರುಕಟ್ಟೆ ಮತ್ತು ಮಾಜಿ ಪುರಸಭೆ ಸರ್ಕಾರಿ ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮತ್ತು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಗುತ್ತಿಗೆದಾರರು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.