ಸೋಮವಾರ, ಆಗಸ್ಟ್ 15, 2022
20 °C

ಆರ್‌ಎಸ್‌ಎಸ್‌ ಕಂಡರೆ ಎಡಪಂಥಿಯರಿಗೆ ಭಯ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕುರುಬರ ಎಸ್ಟಿ ಹೋರಾಟದಲ್ಲಿ ಆರ್‌ಎಸ್‌ಎಸ್‌ ಪಾತ್ರ ಇಲ್ಲ. ಕಾಗಿನೆಲೆ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೊರಾಟ ಇದು. ಅದರೂ ಎಡಪಂಥೀಯರು ಆರ್‌ಎಸ್‌ಎಸ್‌ ಪಾತ್ರ ಇದೆ ಎನ್ನುತ್ತಿದ್ದಾರೆ. ಅವರಿಗೆ ಆರ್‌ಎಸ್‌ಎಸ್‌ ಅಂದ್ರೆ ಭಯ. ಅದಕ್ಕೆ ಈ ಆರೋಪ ಮಾಡ್ತಿದ್ದಾರೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ನನ್ನಂಥ ಕೋಟ್ಯಂತರ ದೇಶಭಕ್ತರನ್ನು ಸೃಷ್ಟಿಸಿದ್ದು ಆರ್‌ಎಸ್‌ಎಸ್‌. ಕಾಮಾಲೆ ರೋಗದವರಿಗೆ ಎಲ್ಲವೂ ಹಳದಿ ಕಾಣುವಂತೆ ಇವರಿಗೆ ಎಲ್ಲದರಲ್ಲೂ ಆರ್‌ಎಸ್‌ಎಸ್‌ ಕಾಣುತ್ತದೆ ಎಂದು ಟೀಕಿಸಿದರು.

ಈ ಹೋರಾಟ ಪಕ್ಷಾತೀತವಾಗಿ ನಡೆಯುತ್ತಿದೆ. ನಾನು, ಎಚ್.ಎಂ. ರೇವಣ್ಣ, ಬಂಡೆಪ್ಪ ಕಾಶೆಂಪೂರ, ವಿಶ್ವನಾಥ್ ಹೀಗೆ ಎಲ್ಲ ಪಕ್ಷದವರು ಇದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಸಮ್ಮತಿ ಪಡೆದೇ ಹೋರಾಟಕ್ಕೆ ಇಳಿದಿದ್ದೇವೆ. ಸಿದ್ದರಾಮಯ್ಯ ಯಾವಾಗ ಬಂದರೂ ಸ್ವಾಗತಿಸುತ್ತೇವೆ ಎಂದು ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು