ಬುಧವಾರ, ಏಪ್ರಿಲ್ 21, 2021
25 °C
ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿರುದ್ಧ ಕಾನೂನು ಹೋರಾಟ: ಗಂಗಾಧರ ಕುಲಕರ್ಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿರುದ್ಧ ಏಪ್ರಿಲ್‌ ಕೊನೆಯ ವಾರದಲ್ಲಿ ಕಾನೂನು ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಬಾರದು ಎಂದು ಸುಪ್ರೀಂ ಕೋರ್ಟ್‌ ಕೂಡ ಆದೇಶ ನೀಡಿದೆ. ಆದರೂ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದೆ. ಧ್ವನಿವರ್ಧಕದ ಶಬ್ದ ಇಷ್ಟೇ ಡೆಸಿಬಲ್‌ ಇರಬೇಕು ಎಂಬ ನಿಯಮ ಕೂಡ ಇದೆ. ಆದರೆ, ಯಾವುದೂ ಪಾಲನೆಯಾಗುತ್ತಿಲ್ಲ. ಆಸ್ಪತ್ರೆ, ಶಾಲಾ–ಕಾಲೇಜುಗಳ ಸಮೀಪದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ವಿರುದ್ಧ ರಾಜ್ಯದಾದ್ಯಂತ ದೂರು ದಾಖಲಿಸುವ ಆಂದೋಲನ ನಡೆಸುತ್ತೇವೆ’ ಎಂದು ತಿಳಿಸಿದರು. 

ಸುಪ್ರೀಂ ಕೋರ್ಟ್‌ ತೀರ್ಪಿನ ನಂತರವೂ ‘ವಿವಾದಿತ ರಾಮಮಂದಿರ’ ಎಂಬ ಪದ ಬಳಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧವೂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದ ಅವರು, ‘ಆರ್‌ಎಸ್‌ಎಸ್‌ ಸಂಘಟನೆಯನ್ನು ಪಾಕಿಸ್ತಾನದ ಮದರಸಾಗಳಿಗೆ ಹೋಲಿಕೆ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆ ಖಂಡನೀಯ. ಆರ್‌ಎಸ್‌ಎಸ್‌ ಏನು ಮಾಡುತ್ತದೆ; ಪಾಕಿಸ್ತಾನದ ಮದರಸಾಗಳು ಏನು ಮಾಡುತ್ತವೆ ಎಂಬ ಕನಿಷ್ಠ ಜ್ಞಾನವೂ ಅವರಿಗೆ ಇಲ್ಲ. ಅವರು ತಕ್ಷಣ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು