ಗುರುವಾರ , ನವೆಂಬರ್ 14, 2019
19 °C

ಅಲಗಿಲವಾಡ: ಚಿರತೆ ಸೆರೆ

Published:
Updated:

ಹರಪನಹಳ್ಳಿ: ತಾಲ್ಲೂಕಿನ ಅಲಗಿಲವಾಡ ಗ್ರಾಮದ ಜಮೀನೊಂದರಲ್ಲಿ ಇಟ್ಟಿದ್ದ ಬೋನಿಗೆ ಶುಕ್ರವಾರ ಬೆಳಿಗ್ಗೆ ಚಿರತೆ ಸೆರೆಯಾಗಿದೆ.

ಚಿರತೆ ಹಾವಳಿಯಿಂದ ಆತಂಕಗೊಂಡಿದ್ದ ಗ್ರಾಮಸ್ಥರು ನಿಟ್ಟುಸಿರುವ ಬಿಟ್ಟಿದ್ದಾರೆ. ಗ್ರಾಮಸ್ಥರ ಒತ್ತಾಯದ ಮೇರೆಗೆ ಎ.ಎಂ. ವಿಶ್ವನಾಥ್‍ ಅವರ ಜಮೀನಿನಲ್ಲಿ ಅರಣ್ಯ ಇಲಾಖೆ ಬೋನು ಇಟ್ಟಿತ್ತು.

ಹಲವು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆ ರೈತರ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಬೆಳಗಿನ ಜಾವ ಬೋನಿನಲ್ಲಿ ಬಿದ್ದು ಸೆರೆ ಸಿಕ್ಕಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ.

 

ಪ್ರತಿಕ್ರಿಯಿಸಿ (+)