ಕಡರನಾಯ್ಕನಹಳ್ಳಿ: ಯಲವಟ್ಟಿ ಗ್ರಾಮದ ಬಳಿ ಸೋಮವಾರ ರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭಯ ಭೀತರಾಗಿದ್ದಾರೆ.

ಯಲವಟ್ಟಿ - ಹೊಳೆ ಸಿರಿಗೆರೆ ರಸ್ತೆ ಬದಿಯ ಮನೆಗಳಲ್ಲಿ ಸಾಕಿದ್ದ ಕೋಳಿಗಳು ನಾಪತ್ತೆಯಾಗಿದ್ದವು. ಅದೇ ದಿನ ರಾತ್ರಿ 10.30ರ ಸುಮಾರಿಗೆ ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಹೊಳೆ ಸಿರಿಗೆರೆ ಗ್ರಾಮದ ವ್ಯಕ್ತಿಯೊಬ್ಬರಿಗೆ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಅವರು ಭಯದಲ್ಲೇ ಮೊಬೈಲ್ನಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದಿದ್ದಾರೆ.

ಅರಣ್ಯ ಇಲಾಖೆಯ ಡಿಆರ್ಎಫ್ಒ ಹಸನ್ ಮತ್ತು ಸಿಬ್ಬಂದಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಈ ಭಾಗದಲ್ಲಿ ತೋಟ ಮತ್ತು ಹೊಲ, ಗದ್ದೆಗಳಿದ್ದು, ರೈತರು ಓಡಾಡಲು ಭಯ ಪಡುತ್ತಿದ್ದಾರೆ. ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ’ ಎಂದು ಗ್ರಾಮದ ಮುಖಂಡ ಓಮಕೇಶ್ವರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಸಿದ್ದೇಶ್ ಸ್ವಾಮಿ, ಹೊರಟ್ಟಿ ರಾಜು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.