ಚನ್ನಗಿರಿಯಲ್ಲಿ ಚಿರತೆ ಸೆರೆ: ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕು ದಾಗಿನಕಟ್ಟೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. 4 ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಭಾನುವಾರ ರಾತ್ರಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಂಡು ಭಯಭೀತರಾಗಿದ್ದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಅರಣ್ಯ ಇಲಾಖೆಯ 20 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.