ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡಕ್ಕೆ ಕೇಂದ್ರ ಅನುದಾನ ನೀಡಲಿ’

ಕಸಾಪ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮತಿ ಜಯಪ್ಪ
Last Updated 29 ನವೆಂಬರ್ 2022, 5:00 IST
ಅಕ್ಷರ ಗಾತ್ರ

ದಾವಣಗೆರೆ: ‘ಶಾಸ್ತ್ರೀಯ ಸ್ಥಾನಮಾನ ಸಿಕ್ಕಿರುವ ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ವಿಳಂಬ ಮಾಡುತ್ತಿದ್ದು, ಶೀಘ್ರ ಅನುದಾನ ನೀಡಬೇಕು’ ಎಂದು ಕಸಾಪ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮತಿ ಜಯಪ್ಪ ಆಗ್ರಹಿಸಿದರು.

ದಾವಣಗೆರೆ ಮಹಾನಗರ ಪಾಲಿಕೆ, ಕನ್ನಡಪರ ಸಂಘ–ಸಂಸ್ಥೆಗಳು ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

‘ಬಿಬಿಸಿ ಅರ್ಥ್’, ‘ವೈಲ್ಡ್ ಅನಿಮಲ್’, ‘ನ್ಯಾಷನಲ್ ಜಿಯೊಗ್ರಾಫಿಕ್’, ‘ಅನಿಮಲ್ ಪ್ಲಾನೆಟ್’ ನಂತಹ ಚಾನಲ್‌ಗಳು ವಿದ್ಯಾರ್ಥಿಗಳಿಗೆ ಜ್ಞಾನ ನೀಡುತ್ತವೆ. ತಮಿಳು, ತೆಲುಗಿನಲ್ಲಿ ಪ್ರಸಾರವಾಗುವ ಇವು ಕನ್ನಡದಲ್ಲಿ ಪ್ರಸಾರವಾಗುತ್ತಿಲ್ಲ. ಆದ್ದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಚಿವರಿಗೆ ಆಗ್ರಹಿಸುವ ಮೂಲಕ ಕನ್ನಡದಲ್ಲಿ ಪ್ರಸಾರವಾಗುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ಜಿ.ಶಿವಕುಮಾರ್ ಮಾತನಾಡಿದರು. ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಉಪಮೇಯರ್ ಗಾಯಿತ್ರಿಬಾಯಿ ಖಂಡೋಜಿರಾವ್, ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಮಾಜಿ ಮೇಯರ್ ಎಸ್‌.ಟಿ. ವೀರೇಶ್, ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಸೋಗಿ ಶಾಂತಕುಮಾರ್, ಎ.ನಾಗರಾಜ್ ಇದ್ದರು. ಬೆಳಿಗ್ಗೆ ಮೆರವಣಿಗೆಯನ್ನು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಾಮದೇವಪ್ಪ ಉದ್ಘಾಟಿಸಿದರು. ಪತ್ರಕರ್ತ ನಾಗರಾಜ್ ಬಡದಾಳ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT