ಶುಕ್ರವಾರ, ಸೆಪ್ಟೆಂಬರ್ 24, 2021
24 °C
ಈ ಸರ್ಕಾರ ಆರು ತಿಂಗಳಲ್ಲಿ ಬೀಳಲಿದೆ ಎಂದಿದ್ದ ಸಿದ್ದರಾಮಯ್ಯಗೆ ಸಚಿವ ಬೈರತಿ ಬಸವರಾಜ ತಿರುಗೇಟು

‘ಸಿದ್ದರಾಮಯ್ಯ ತಮ್ಮ ಭವಿಷ್ಯ ನೋಡಿಕೊಳ್ಳಲಿ’; ಸಚಿವ ಬೈರತಿ ಬಸವರಾಜ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸರ್ಕಾರ ಟೇಕಾಫ್ ಆಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಿದ್ದರೆ ಸರ್ಕಾರವೇನು ಆಕಾಶದಲ್ಲಿ ಹಾರಿ
ಕೊಂಡು ಹೋಗುತ್ತಿತ್ತಾ? ಆರು ತಿಂಗಳಲ್ಲಿ ಸರ್ಕಾರ ಪತನಗೊಳ್ಳಲಿದೆ ಎಂದು ಸುಮ್ಮನೆ ಭವಿಷ್ಯ ನುಡಿಯುವ ಮೊದಲು ಅವರ ಭವಿಷ್ಯವನ್ನು ಸಿದ್ದರಾಮಯ್ಯ ಯೋಚಿಸಲಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವ್ಯಂಗ್ಯವಾಡಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಂದೆ ಮುಖ್ಯಮಂತ್ರಿ ಆಗುತ್ತಾರಾ ಇಲ್ಲವಾ ಎಂದು ಮೊದಲು ಭವಿಷ್ಯ ನುಡಿಯಲಿ’ ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ಇನ್ನೂ 8-10 ದಿನಗಳಾಗಿಲ್ಲ. ಆಗಲೇ ನಾಲ್ಕು ಜಿಲ್ಲೆಗಳ ಪ್ರವಾಸ ಮಾಡಿದ್ದಾರೆ. ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ ಎಂದು  ಸಮರ್ಥಿಸಿಕೊಂಡರು.

‘ಗಡಿ ಜಿಲ್ಲೆಗಳಿಗೆ ಯಾರಾದರೂ ವಿರೋಧ ಪಕ್ಷದ ನಾಯಕರು ಹೋಗಿದ್ದಾರಾ, ವಸ್ತುಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರಾ, ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರಾ? ಎಲ್ಲೋ ಕುಳಿತು ಹೇಳಿಕೆ ನೀಡುವುದು ಸರಿಯಲ್ಲ’ ಎಂದು ಟೀಕಿಸಿದರು.

‘ಸಚಿವ ಸಂಪುಟ ವಿಸ್ತರಣೆ ಸಂಬಂಧ ಯಾವುದೇ ಗೊಂದಲ ಇಲ್ಲ. ರಾಜ್ಯದ ಪ್ರಗತಿಗೆ ಬದ್ಧರಾಗಿದ್ದೇವೆ. ಅಸಮಾಧಾನ ಮುಗಿದಿದೆ. ಎಲ್ಲರೂ ಸಂತೋಷದಿಂದಿದ್ದೇವೆ’ ಎಂದರು.

‘ಮುಂದಿನ ಗುರುವಾರ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಸಾಧಕ-ಬಾಧಕ ಚರ್ಚೆ ಮಾಡುತ್ತೇವೆ. ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು