ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಮನ್‌ ಕೀ ಬಾತ್’‌ನಲ್ಲಿ ಹಾಥರಸ್ ಘಟನೆ ಪ್ರಸ್ತಾಪಿಸಲಿ

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಕೆಪಿಸಿಸಿ ವಕ್ತಾರ ಡಿ.ಬಸವರಾಜ್
Last Updated 23 ಅಕ್ಟೋಬರ್ 2020, 16:16 IST
ಅಕ್ಷರ ಗಾತ್ರ

ದಾವಣಗೆರೆ: ಈ ತಿಂಗಳ ಕೊನೆಯ ಭಾನುವಾರ ನಡೆಯುವ ‘ಮನ್ ಕೀ ಬಾತ್‌’ನಲ್ಲಿ ಹಾಥರಸ್‌ನಲ್ಲಿ ಘಟನೆಯ ಬಗ್ಗೆ ಪ್ರಸ್ತಾಪಿಸಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

‘ದೇಶದಲ್ಲಿ ಅನೇಕ ಜ್ವಲಂತ ಸಮಸ್ಯೆಗಳು ಇದ್ದು, ಅವುಗಳ ಬಗ್ಗೆ ಬೆಳಕು ಚೆಲ್ಲಬೇಕು. ಅದು ಬಿಟ್ಟುಜನರಿಗೆ ಪುಕ್ಸಟ್ಟೆ ಉಪದೇಶಗಳನ್ನು ಕೊಡುವುದರಿಂದ ‘ಮನ್ ಕೀ ಬಾತ್’ ತನ್ನ ಗಂಭೀರತೆಯನ್ನು ಕಳೆದುಕೊಂಡಿದೆ. ಹಾಥರಸ್ ಘಟನೆಯ ಬಗ್ಗೆ ಇದುವರೆಗೂ ಬಾಯಿ ಬಿಟ್ಟಿಲ್ಲ. ಈ ಬಗ್ಗೆ ಮಾತನಾಡುವಂತೆಪ್ರಧಾನಿ ಕಚೇರಿ ಮತ್ತು ನಿವಾಸಕ್ಕೆ ಶುಕ್ರವಾರ ಪತ್ರ ಬರೆದು ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ಡ್ ಪೋಸ್ಟ್ ಮಾಡಲಾಗಿದೆ’ ಎಂದು ಡಿ.ಬಸವರಾಜ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತ್ಯಾಚಾರದ ಬಗ್ಗೆ ಮಾತನಾಡಿಲ್ಲ. ಅವರ ಕುಟುಂಬಕ್ಕೆ ಸಾಂತ್ವನ ಹೇಳಿಲ್ಲ. ಪ್ರಧಾನಿ ಮೋದಿಯವರದ್ದು ಸ್ಟಂಟ್ ರಾಜಕಾರಣವೇ ಹೊರತು ಜನೋಪಕಾರಿ ರಾಜಕಾರಣವಲ್ಲ. ಇನ್ನಾದರೂ ಮೋದಿಯವರು ಇದನ್ನು ಬಿಟ್ಟು ಜನರಿಗೆ ಉಪಕಾರವಾಗುವ ಯೋಜನೆಗಳನ್ನು ಜಾರಿಗೆ ತರುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದಲೇ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದೆ ಎಂದು ಡಿಸಿಎಂ ಅಶ್ವತ್ಥ್‌‌ ನಾರಾಯಣ ಅವರು ಇತ್ತೀಚಿಗೆ ಆರೋಪಿಸಿದ್ದು, ಅಸಲಿಗೆ ಅಶ್ವತ್ಥ ನಾರಾಯಣ ಅವರ ಮಧ್ಯವರ್ತಿ ಕೆಲಸದಿಂದ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಯಿತು. ಇದಕ್ಕಾಗಿ ಇನ್ನೂ ರಾಜಕೀಯದಲ್ಲಿ ಪಳಗದ ಇಂತಹವರಿಗೆ ಬಿಜೆಪಿ ಸರ್ಕಾರ ಡಿಸಿಎಂ ಹುದ್ದೆ ನೀಡಿತು’ ಎಂದು ಆರೋಪಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ವ್ಯಂಗ್ಯವಾಡಿರುವುದನ್ನು ಖಂಡಿಸಿದರು.

ಪಾಲಿಕೆ ವಿರೋಧ ಪಕ್ಷ ನಾಯಕ ಎ. ನಾಗರಾಜ್ ಮಾತನಾಡಿ, ‘ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಅವರ ಕಡೆಗೆ ಒಲವು ಹೊಂದಿರುವುದರಿಂದ ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಪ್ರಚಾರ ನಡೆಯುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಡಿ.ಎಚ್. ಉದಯಕುಮಾರ್, ನಟರಾಜ್, ಡಿ. ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT