ದಾವಣಗೆರೆ: ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದೆ. ವಿಶ್ವೇಶ್ವರಯ್ಯ ಪಾರ್ಕ್‌ನಲ್ಲಿ ಸೋಮವಾರ ಪತ್ರ ಚಳವಳಿ ನಡೆಸಿದರು. ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ರಾಜ್ಯ ಸಮಿತಿ ಕಳೆದ ಸೆ.24ರಿಂದ ಕೆಲಸ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆಕೊಟ್ಟಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೆಲಸ ಖಾಯಂ ಮಾಡಬೇಕು. ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದೇ ಅಧಿಕಾರಿಗಳ ಮೂಲಕ ಶಿಸ್ತುಕ್ರಮದ ಎಚ್ಚರಿಕೆ ನೀಡಲು ನಿರ್ದೇಶನ ನೀಡುತ್ತಿರುವುದು ವಿಷಾದನೀಯ’ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹಾಲಸ್ವಾಮಿ ತಿಳಿಸಿದರು.

ಕೋವಿಡ್ ಸಂದರ್ಭ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಮುಂಚೂಣಿಯಲ್ಲಿ ಕೆಲಸ ಮಾಡಿದ್ದಾರೆ. ನೋಟಿಸ್ ಜಾರಿ ಮಾಡುವ ಮೂಲಕ ನ್ಯಾಯಯುತ ಹೋರಾಟ ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಸಂಘದ ಉಪಾಧ್ಯಕ್ಷ ಡಾ. ಮಂಜುನಾಥ್, ಮಂಜುನಾಥ್ ಎ.ಎಲ್, ಲೀಲಾವತಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ. ಅಂದನಗೌಡ ಪಾಟೀಲ್, ಖಜಾಂಚಿ ಅಂಬರೀಷ್, ಸಂಘಟನಾ ಕಾರ್ಯದರ್ಶಿ ಸಚಿನ್, ರವಿಕುಮಾರ್ ಹೊಳಲ್ಕೆರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.