ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸದಂತೆ ಮುಖ್ಯಮಂತ್ರಿಗೆ ಪತ್ರ’

Last Updated 14 ಜುಲೈ 2021, 7:45 IST
ಅಕ್ಷರ ಗಾತ್ರ

ದಾವಣಗೆರೆ: ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಿದ್ದು ತಪ್ಪು, ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ನಿಯಮಾನುಸಾರ ತುಂಗಾದಿಂದ 15 ಟಿಎಂಸಿ ನೀರು ಪಡೆದು ಭದ್ರಾ ಮೇಲ್ಡಂಡೆ ಯೋಜನೆಗೆ ನೀರು ಪೂರೈಕೆ ಮಾಡಬೇಕು. ಆದರೆ ತುಂಗಾದಿಂದ ನೀರನ್ನೇ ಪಡೆದಿಲ್ಲ. ಈ ವೇಳೆ ನೀರು ಹರಿಸಿದ್ದು, ತಪ್ಪು. ಕೂಡಲೇ ನೀರು ನಿಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

‘ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ ಎಂದು ಯಾರೂ ವಾಹನದಲ್ಲಿ ಓಡಾಡುವುದನ್ನು ನಿಲ್ಲಿಸಿಲ್ಲ.ಕಾಂಗ್ರೆಸ್ ಸರ್ಕಾರ ಇದ್ದಾಗ ಶೇ 116ರಷ್ಟು ಪೆಟ್ರೋಲ್ ದರ ಹೆಚ್ಚಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಶೇ 28ರಷ್ಟು ಹೆಚ್ಚಾಗಿದೆ. ಸೈಕಲ್, ಕಾರುಗಳು, ಬಟ್ಟೆಗಳ ಬೆಲೆ ಹೆಚ್ಚಾದಂತೆ ಪೆಟ್ರೋಲ್ ಬೆಲೆಯೂ ಹೆಚ್ಚುತ್ತಿದೆ’ ಎಂದು ಸಮರ್ಥಿಸಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT