ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಹಣ ಕೊಡದೇ ಇದ್ದುದಕ್ಕೆ ಸಂಸದ ಸಿದ್ದೇಶ್ವರ ವಿರುದ್ಧ ಜೀವ ಬೆದರಿಕೆ?

Published 16 ಜನವರಿ 2024, 5:08 IST
Last Updated 16 ಜನವರಿ 2024, 5:08 IST
ಅಕ್ಷರ ಗಾತ್ರ

ದಾವಣಗೆರೆ: ‘ಸಂಸದ ಜಿ.ಎಂ. ಸಿದ್ದೇಶ್ವರ ಅವರ ವಿರುದ್ಧ ಜೀವ ಬೆದರಿಕೆ ಒಡ್ಡಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಗಾಂಧಿನಗರ ಠಾಣೆಗೆ ದೂರು ನೀಡಿದ್ದಾರೆ.

‘ಜಿ.ಎಂ. ಸಿದ್ದೇಶ್ವರ ಅವರು ನಾಲ್ಕು ಬಾರಿ ಸಂಸದರಾಗಿದ್ದು, ಅವರ ಹಾಗೂ ಕುಟುಂಬದವರ ವಿರುದ್ಧ ಸ್ವಾಮಿ ಹಾಗೂ ಅನುಪಮಾ ಎಂಬುವರು ನಾವು ಕೇಳಿದಷ್ಟು ಹಣ ಕೊಡಿ ಇಲ್ಲದಿದ್ದರೆ ನಿಮ್ಮ ಬಗ್ಗೆ ಆರೋಪ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಸುತ್ತೇವೆ ಎಂದು ಈ ಹಿಂದೆ ಬೇಡಿಕೆ ಇಟ್ಟಿದ್ದರು. ನಾವ್ಯಾಕೆ ಹಣ ಕೊಡಬೇಕು ಎಂದು ನಮ್ಮ ನಾಯಕರು ತಿರಸ್ಕರಿಸಿದ್ದರು’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಹಣ ಕೊಡಲು ನಿರಾಕರಿಸಿದ್ದರಿಂದ ಅವರು ಅವರ ಕುಟುಂಬದವರನ್ನು ಕುರಿತು ಅಲ್ಲಲ್ಲಿ ಅವಾಚ್ಯ, ಅಶ್ಲೀಲವಾಗಿ ನಿಂದಿಸುವುದು, ಒಂದು ದಿನ ಸರಿಯಾಗಿ ಮಾಡುತ್ತೇವೆ ಎಂದು ಬೆದರಿಕೆ ಹಾಕುವುದು ಮಾಡುತ್ತಿದ್ದರು. ಹಣ ಪಡೆಯಲು ಸಫಲರಾಗಲಿಲ್ಲ ಎಂದು ಹತಾಶೆಗೊಂಡು ನಮ್ಮ ನಾಯಕರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

‘ಇದರ ಹಿಂದೆ ರಾಜಕೀಯ ದುರುದ್ದೇಶವಿದ್ದು, ಹಲವರ ಕುಮ್ಮಕ್ಕೂ ಇದೆ. ಆದ್ದರಿಂದ ಸುದ್ದಿ ಪ್ರಸಾರ ಮಾಡಿರುವ ಚಾನಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT