ದಾವಣಗೆರೆ: ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂನ್ 14ರ ವರೆಗೆ ಮುಂದುವರಿಸಲಾಗಿದೆ. ಖರೀದಿಗೆ ವಾರದಲ್ಲಿ ಎರಡು ದಿನ ಇದ್ದ ಅವಕಾಶವನ್ನು ಮೂರು ದಿನಗಳಿಗೆ ಹೆಚ್ಚಿಸಲಾಗಿದೆ. ಜೂನ್ 7, 9 ಮತ್ತು 11ರಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಖರೀದಿ ಮಾಡಲು ಅವಕಾಶ ನೀಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಮದ್ಯದ ಅಂಗಡಿಗಳಿಗೆ ಈ ಮೂರು ದಿನ ಮಧ್ಯಾಹ್ನದವರೆಗೆ ಅವಕಾಶ ನೀಡಲಾಗಿದೆ.ಉಳಿದ ದಿನಗಳಲ್ಲಿ ಹಾಲು ಮತ್ತು ಔಷಧಗಳನ್ನು ಹೊರತುಪಡಿಸಿ ಸಂಪೂರ್ಣ
ಬಂದ್ ಇರುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಈ ಸಮಯದಲ್ಲಿ ಯಾವುದೇ ಮದುವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಹಿಂದಿನ ನಿಯಮಗಳೇ ಜಾರಿಯಲ್ಲಿರುತ್ತವೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.