ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಕೋಟೆಗಳೂ ಬದಲಾಗುತ್ತವೆ: ನಟ ಶಿವರಾಜಕುಮಾರ್ ವಿಶ್ವಾಸ

Published 12 ಮಾರ್ಚ್ 2024, 0:19 IST
Last Updated 12 ಮಾರ್ಚ್ 2024, 0:19 IST
ಅಕ್ಷರ ಗಾತ್ರ

ದಾವಣಗೆರೆ: ‘ಪತ್ನಿ ಗೀತಾ ಶಿವಮೊಗ್ಗದಲ್ಲೇ ಹುಟ್ಟಿದವರು. ಯಾವಾಗಲೂ ಶಿವಮೊಗ್ಗಕ್ಕೆ ಹೋಗಿ ಬರುತ್ತಿರುತ್ತಾರೆ. ಅವರಿಗೆ ಅಲ್ಲಿನ ಸಮಸ್ಯೆ ಬಗ್ಗೆ ಗೊತ್ತಿದೆ. ಈ ಬಾರಿ ಮತದಾರರು ಲೋಕಸಭೆ ಚುನಾವಣೆಯಲ್ಲಿ ಅವರನ್ನು ಆಶೀರ್ವದಿಸಲಿದ್ದಾರೆ’ ಎಂದು ನಟ ಶಿವರಾಜಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ಅಭಿನಯದ ‘ಕರಟಕ ದಮನಕ’ ಚಿತ್ರದ ವಿಜಯಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋಮವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಗೀತಾ ಅವರು ಈಗಾಗಲೇ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ಬಿಜೆಪಿ ಭದ್ರಕೋಟೆ ಎಂದು ಹೇಳುತ್ತಾರೆ. ಆದರೆ ಈಗ ಅದೆಲ್ಲ ಇಲ್ಲ. ಭದ್ರಕೋಟೆಗಳೂ ಬದಲಾಗುತ್ತವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT