ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಳಿ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

Published 4 ಜೂನ್ 2024, 14:19 IST
Last Updated 4 ಜೂನ್ 2024, 14:19 IST
ಅಕ್ಷರ ಗಾತ್ರ

ಹೊನ್ನಾಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪುರಸಭೆ ಮಾಜಿ ಸದಸ್ಯ ಎಚ್.ಬಿ.ಅಣ್ಣಪ್ಪ ಅವರ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

‘ಕಳೆದ ಎರಡು ದಶಕಗಳಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾ ಬಂದಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸುವ ಮೂಲಕ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ವಶಪಡಿಸಿಕೊಂಡಿದೆ’ ಎಂದು ಎಚ್.ಬಿ.ಅಣ್ಣಪ್ಪ ಹೇಳಿದರು.

‘ಎರಡು ದಶಕಗಳ ನಿರಂತರ ದುರಾಡಳಿತದಿಂದ ಬೇಸತ್ತ ಜಿಲ್ಲೆಯ ಮತದಾರರು ಈ ಬಾರಿ ವಿದ್ಯಾವಂತರಾದ, ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ತಮ್ಮದೇ ಆದ ಯೋಜನೆಗಳನ್ನು, ನಿರೀಕ್ಷೆಯನ್ನು ಇಟ್ಟುಕೊಂಡಿರುವ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಜಿಲ್ಲೆಯ ಜನ ಆಶೀರ್ವದಿಸುವ ಮೂಲಕ ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಿದ್ದಾರೆ’ ಎಂದರು.

ವಿಜಯೋತ್ಸವದಲ್ಲಿ ಕಾಂಗ್ರೆಸ್‌ನ ನೂರಾರು ಯುವಕರು ಪಕ್ಷದ ಬೃಹತ್ ಗಾತ್ರದ ಧ್ವಜ ಹಿಡಿದು ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿದರು. ಕಾಂಗ್ರೆಸ್ ಪಕ್ಷಕ್ಕೆ ಜಯಕಾರ ಹಾಕುವ ಮೂಲಕ ಸಂಭ್ರಮಿಸಿದರು.

ಪುರಸಭೆಯ ಮಾಜಿ ಸದಸ್ಯ ಎಚ್.ಡಿ.ವಿಜೇಂದ್ರಪ್ಪ, ರಾಜು ಸರಳಿನಮನೆ, ಪುರಸಭೆ ಸದಸ್ಯರಾದ ರಾಜೇಂದ್ರ, ತನ್ವೀರ್ ಅಹ್ಮದ್, ಎಚ್.ಕಡದಕಟ್ಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜೇಶ್, ಮಾಜಿ ಉಪಾಧ್ಯಕ್ಷ ಮಾದಪ್ಪ, ಯುವ ಕಾಂಗ್ರೆಸ್ ಮುಖಂಡ ಎಚ್‌.ಎಸ್‌.ರಂಜಿತ್, ರಾಜು, ಮಂಜಪ್ಪ, ದ್ಯಾಮಜ್ಜಿ ಗಿರೀಶ್, ಚಮನ್ ಸಾಬ್‌, ವಿಜಯಗೌಡ, ಗಿರೀಶ್ ಕುಂಬಾರ್ ಸೇರಿ ನೂರಾರು ಜನರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT