ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಲೋಕಾಯುಕ್ತ ಬಲೆಗೆ ಸರ್ವೆ ಅಧಿಕಾರಿ

Published 9 ನವೆಂಬರ್ 2023, 16:30 IST
Last Updated 9 ನವೆಂಬರ್ 2023, 16:30 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯದ ಭೂ ದಾಖಲೆ ಮತ್ತು ಸರ್ವೆ ಇಲಾಖೆಯ ಸರ್ವೆ ಸೂಪರಿಂಟೆಂಡೆಂಟ್‌ ಕೇಶವಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಾರ್ಯಾಲಯದ ತಮ್ಮ ಕಚೇರಿಯಲ್ಲಿ ₹ 5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೊಸೆಯ ತಾಯಿಯ ಹೆಸರಿನಲ್ಲಿರುವ ಜಮೀನಿನ ಚೆಕ್‌ ಬಂದಿ ಮತ್ತು ಪೋಡಿಯ ನಂಬರ್‌ ಅದಲು ಬದಲಾಗಿದ್ದು, ಅದನ್ನು ಸರಿಪಡಿಸಿಕೊಡುವಂತೆ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮದ ಪಿ.ಜಿ. ಮುನಿಯಪ್ಪ ಅವರು ಅರ್ಜಿ ಸಲ್ಲಿಸಿದ್ದರು.

ಚೆಕ್‌ ಬಂದಿ ಮತ್ತು ಪೋಡಿಯ ನಂಬರ್‌ ಸರಿಪಡಿಸಲು ₹ 40,000 ಲಂಚ ಕೊಡುವಂತೆ ಕೇಶವಮೂರ್ತಿ ಬೇಡಿಕೆ ಇಟ್ಟಿದ್ದರು. ಬಳಿಕ ₹ 30,000ಕ್ಕೆ ವ್ಯವಹಾರ ಕುದುರಿಸಿದ್ದರು.

ಮುನಿಯಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT