ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Published 11 ಜುಲೈ 2024, 4:15 IST
Last Updated 11 ಜುಲೈ 2024, 4:15 IST
ಅಕ್ಷರ ಗಾತ್ರ

ದಾವಣಗೆರೆ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇರೆಗೆ ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್ ‌ಉಮೇಶ್ ಹಾಗೂ ‘ಬೆಸ್ಕಾಂ’ ಜಾಗೃತ ದಳದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್.ಪ್ರಭಾಕರ ಎಂಬುವರಿಗೆ ಸೇರಿದ 8 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಡಿ.ಎಚ್.ಉಮೇಶ್ ಅವರಿಗೆ ಸೇರಿದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಐದು ಸ್ಥಳ ಹಾಗೂ ಪ್ರಭಾಕರ್ ಅವರಿಗೆ ಸೇರಿದ ದಾವಣಗೆರೆಯ ವಿವಿಧೆಡೆಯ ಮೂರು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಗುಪ್ತ ಮಾಹಿತಿಯ ಮೇರೆಗೆ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾವಣಗೆರೆ, ಹಾವೇರಿ, ಗದಗ ಹಾಗೂ ಬಳ್ಳಾರಿ ಲೋಕಾಯುಕ್ತ ಪೊಲೀಸರ ಎಂಟು ತಂಡಗಳು ವಿವಿಧೆಡೆ ಪರಿಶೀಲನೆ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT