ದಾವಣಗೆರೆ: ನಂದಿನಿ ಹಾಲು ಒಕ್ಕೂಟ ಸಹಕಾರ ಸಂಘದ ಆಡಳಿತ ಮಂಡಳಿ ರಚನೆಗೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಲು ₹ 3,000 ಲಂಚ ಪಡೆಯುತ್ತಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ (ಸಿಡಿಒ) ಸತೀಶ್ ನಾಯ್ಕ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸಂಘದ ಆಡಳಿತ ಮಂಡಳಿ ರಚನೆಗೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಲು ಹೊನ್ನಾಳಿ ತಾಲ್ಲೂಕಿನ ಚೀಲಾಪುರ ಗ್ರಾಮದ ದೇವರಾಜ ಅವರ ಬಳಿ ಸತೀಶ್ ನಾಯ್ಕ ಅವರು ಲಂಬಾಣಿ ಭಾಷೆಯಲ್ಲಿ ₹ 5,000 ಲಂಚ ಕೇಳಿದ್ದರು. ಈ ಬಗ್ಗೆ ದಾವಣಗೆರೆ ಲೋಕಾಯುಕ್ತ ಪೊಲೀಸರಿಗೆ ದೇವರಾಜ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಎಚ್.ಗುರುಬಸವರಾಜ್, ಸರಳಾ ಪಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.