ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ಗೆ ಲಾರಿ ಡಿಕ್ಕಿ: ಯುವತಿ ಸಾವು

Last Updated 30 ಅಕ್ಟೋಬರ್ 2020, 10:41 IST
ಅಕ್ಷರ ಗಾತ್ರ

ದಾವಣಗೆರೆ: ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್‌ ಸವಾರ ಗಾಯಗೊಂಡಿದ್ದಾನೆ.

ಹನಗವಾಡಿ ಗ್ರಾಮದ ಬಸಪ್ಪ ಅವರ ಪುತ್ರಿ ಕೋಮಲಾ (17) ಮೃತಪಟ್ಟವರು. ಬೈಕ್ ಸವಾರ ಯುವಕ ಗಾಯಗೊಂಡಿದ್ದು, ಹರಿಹರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದುರಿನಿಂದ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.ಸ್ಥಳಕ್ಕೆ ಗ್ರಾಮಾಂತರ ಪಿಎಸ್ಐ ಡಿ. ರವಿಕುಮಾರ್, ಸೈಫುದ್ದಿನ್ ಭೇಟಿ ನೀಡಿದ್ದರು. ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT