ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ ಅಭಿವೃದ್ಧಿ ಬದ್ಧತೆ ನಮಗೆ ಇದೆ: ಶಾಮನೂರು ಶಿವಶಂಕರಪ್ಪ

Published 25 ಏಪ್ರಿಲ್ 2024, 5:10 IST
Last Updated 25 ಏಪ್ರಿಲ್ 2024, 5:10 IST
ಅಕ್ಷರ ಗಾತ್ರ

ದಾವಣಗೆರೆ: ‘ಯಾವುದೇ ಸರ್ಕಾರ ಇದ್ದರೂ ನಾವು ದಾವಣಗೆರೆ ಅಭಿವೃದ್ಧಿಗೆ ಬದ್ದರಿದ್ದೇವೆ. ನೀವೂ ನಮ್ಮನ್ನು ಬೆಂಬಲಿಸುವ ಮೂಲಕ ದಾವಣಗೆರೆ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 6ನೇ ವಾರ್ಡ್‍ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

‘ನಾನು ಹಾಗೂ ಮಲ್ಲಿಕಾರ್ಜುನ್ ದಾವಣಗೆರೆ ಅಭಿವೃದ್ಧಿಗೆ ಕಂಕಣಬದ್ದರಾಗಿ ಕೆಲಸ ಮಾಡಿದ್ದೇವೆ. ಸರ್ವ ಜನಾಂಗಕ್ಕೂ ಒಳಿತನ್ನು ಬಯಸುವ ಪಕ್ಷ ಕಾಂಗ್ರೆಸ್. ಆ ಪಕ್ಷದಿಂದ ಡಾ.ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧಿಸಿದ್ದು, ಮೇ 7ರಂದು ಮತದಾನ ಮಾಡುವ ಮೂಲಕ ಹೆಚ್ಚಿನ ಅಂತರದಿಂದ ಗೆಲ್ಲಿಸಿ ದೆಹಲಿಗೆ ಕಳುಹಿಸಿಕೊಡಬೇಕು’ ಎಂದು ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಸಾಧಿಕ್ ಪೈಲ್ವಾನ್, ಅನಿತಾಬಾಯಿ ಮಾಲತೇಶ್, ಮಹಾನಗರ ಪಾಲಿಕೆ ಸದಸ್ಯ ಎಲ್.ಡಿ.ಗೋಣೆಪ್ಪ., ಮಾಜಿ ಮೇಯರ್ ಗೋಣೆಪ್ಪ, ಕುರುಬರಕೇರಿ ಮಂಜುನಾಥ್, ಎಸ್. ಮಲ್ಲಿಕಾರ್ಜುನ್, ಸುರೇಶ್ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ವಾರ್ಡ್ ಅಧ್ಯಕ್ಷ ಸಾಲುಮನಿ ಬಸವರಾಜ್, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ್, ಜಮ್ನಳ್ಳಿ ನಾಗರಾಜ್, ಅಜ್ಜಪ್ಪ, ಕುರುಬರಕೇರಿ ರಾಜು, ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT