ಚನ್ನಗಿರಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕಾರ್ಯನಿರ್ವಹಿಸಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಅವರು ಬದ್ಧರಾಗಿರುತ್ತಾರೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಚೆಗೆ ನಾನು ಮತ್ತು ಹಲವು ಶಾಸಕರು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಸಂಘಟಿಸಿ, ಮತ್ತೆ ಅಧಿಕಾರ ಹಿಡಿಯುವಂತೆ ಕಿವಿಮಾತು ಹೇಳಿದ್ದರು’ ಎಂದು ತಿಳಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಎಲ್ಲ ಶಾಸಕರಿಗೂ ಸೂಚಿಸಿದ್ದರು ಎಂದು ಹೇಳಿದರು. ಪುರಸಭೆ ಸದಸ್ಯರಾದ ಪಟ್ಲಿ ನಾಗರಾಜ್, ಪರಮೇಶ್ ಪಾರಿ, ಚ.ಮ. ಗುರುಸಿದ್ದಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.