ಚನ್ನಗಿರಿ: ‘ಲಂಚದ ಪ್ರಕರಣ ನನ್ನ ಜೀವನದಲ್ಲಿ ಕಪ್ಪು ಚುಕ್ಕೆಯಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಯಾರದೋ ಕೈವಾಡದಿಂದ ಇಂದು ಆರೋಪಿಯಾಗಿದ್ದೇನೆ. ಈ ಆರೋಪದಿಂದ ಮುಕ್ತನಾಗಿ ಹೊರ ಬರುತ್ತೇನೆ’ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಗದ್ಗದಿತರಾಗಿ ನುಡಿದರು.
ಪಟ್ಟಣದ ಕೆರೆ ಏರಿ ಚೌಡೇಶ್ವರಿ ದೇವಸ್ಥಾನ ಬಳಿ ಸೋಮವಾರ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಲೋಕಾರ್ಪಣೆ, ಭೂಮಿಪೂಜೆ ಹಾಗೂ ಹೊಸ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಅಧಿಕಾರ ಇರಲಿ, ಬಿಡಲಿ ನನ್ನ ಉಸಿರು ಇರುವವರೆಗೂ ಈ ಕ್ಷೇತ್ರದ ಜನರ ಸೇವೆ ಮಾಡುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ವಿರೋಧ ಪಕ್ಷದವರು, ಆಡಳಿತ ಪಕ್ಷದವರು, ಅಧಿಕಾರಿ ವರ್ಗ ಹಾಗೂ ಇಡೀ ಕ್ಷೇತ್ರದ ಜನತೆ ಸಹಕಾರ ನೀಡಿದ್ದಾರೆ. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ನೀವು ಕೂಡಾ ನನ್ನ ಜತೆ ಇದ್ದು, ಸಹಕಾರವನ್ನು ನೀಡಿ’ ಎಂದು ಅವರು ಕೋರಿದರು.
ಉಪ ವಿಭಾಗಾಧಿಕಾರಿ ತಿಮ್ಮಣ್ಣ ಹುಲುಮನಿ, ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ, ಬೆಸ್ಕಾಂ ಇಇ ಎಸ್.ಕೆ. ಪಾಟೀಲ್, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಜರೀನಾಬೀ, ಮುಖ್ಯಾಧಿಕಾರಿ ಕೆ. ಪರಮೇಶ್, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಸಿಪಿಐ ಪಿ.ಬಿ. ಮಧು, ಪಿ. ಲೋಹಿತ್ ಕುಮಾರ್, ಜೆ. ರಂಗನಾಥ್ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.