ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜಿನಪ್ಪ ಗಡೀಪಾರಿಗೆ ಮಡಿವಾಳ ಸಮಾಜ ಆಗ್ರಹ

Last Updated 9 ನವೆಂಬರ್ 2020, 15:37 IST
ಅಕ್ಷರ ಗಾತ್ರ

ದಾವಣಗೆರೆ: ಮಹಿಳೆಯರನ್ನು ಅವಾಚ್ಯ ಪದಗಳಿಂದ ನಿಂದಿಸಿರುವ ಬಿಜೆಪಿ ಒಬಿಸಿ ಯುವ ಮೋರ್ಚಾದ ಜಿಲ್ಲಾ ಘಟಕದ ಉಪಾಧ್ಯಕ್ಷ ಅಂಜಿನಪ್ಪನನ್ನು ಗಡೀಪಾರು ಮಾಡುವಂತೆ ಆಗ್ರಹಿಸಿಜಿಲ್ಲಾ ಮಡಿವಾಳ ಮಾಚಿದೇವ ಸಂಘ ಹಾಗೂ ಜಿಲ್ಲಾ ಮಡಿಕಟ್ಟೆ (ಧೋಬಿಘಾಟ್) ಮಡಿವಾಳರ ಸಂಘಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.

ನಗರದ ಜಯದೇವ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಅಶೋಕ ರಸ್ತೆ, ಮಹಾತ್ಮಾಗಾಂಧಿ ವೃತ್ತ, ಪಿ.ಬಿ. ರಸ್ತೆಯಲ್ಲಿ ಸಾಗಿ ಬಡಾವಣೆ ಠಾಣೆಯ ಬಳಿ ಇರುವ ಡಿವೈಎಸ್‌ಪಿ ಕಚೇರಿಗೆ ತೆರಳಿ ನಾಗೇಶ್ ಐತಾಳ್ ಅವರಿಗೆ ಪ್ರತಿಭಟನಕಾರರು ಮನವಿ ಸಲ್ಲಿಸಿದರು.

ಮಡಿವಾಳ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ನಾಗೇಂದ್ರಪ್ಪ ಮಾತನಾಡಿ, ‘ಸಾಮಾಜಿಕ ಜಾಲತಾಣದಲ್ಲಿ ಕೆಲ ಸಮುದಾಯಗಳನ್ನೇ ಗುರಿಯಾಗಿಟ್ಟುಕೊಂಡು ಜಾತಿ ನಿಂದನೆ ಮಾಡಿದ್ದಲ್ಲದೇ, ಅತ್ಯಾಚಾರಕ್ಕೆ ಪ್ರಚೋದನೆ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಮಾಜದ ಕಾರ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ್ ಮಾತನಾಡಿ, ‘ಬಂಧಿತ ವ್ಯಕ್ತಿಯನ್ನು ಮಾಧ್ಯಮಗಳ ಮೂಲಕ ಬಹಿರಂಗ ಪಡಿಸಬೇಕು. ಅಲ್ಲದೇ 10 ವರ್ಷಗಳ ಕಾಲ ರಾಜ್ಯದಿಂದ ಗಡಿಪಾರು ಮಾಡಬೇಕು. ಯಾವುದೇ ಸಮಾಜದ ಮೇಲೆಪ್ರಚೋದನ ಹೇಳಿಕೆಗಳನ್ನು ನೀಡುವವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು. ಇಲ್ಲವಾದದರೆ ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಸಂಘದ ಸಹಕಾಯದರ್ಶಿ ಆರ್.ಎನ್. ಧನಂಜಯ, ಉಪಾಧ್ಯಕ್ಷರಾದ ವಿಜಯಕುಮಾರ್, ಫೋಟೋ ಮಂಜುನಾಥ್, ಖಚಾಂಚಿ ಸುರೇಶ್ ಕೋಗುಂಡೆ, ನಿದೇರ್ಶಕ ಎಂ.ವೈ. ಸತೀಶ್, ಅಂಜಿನಪ್ಪ ನಿಟುವಳ್ಳಿ, ರುದ್ರೇಶ್, ವೇಣುಗೋಪಾಲ್, ಕಿಶೋರ್‌ ಕುಮಾರ್, ಅಡಿವೆಪ್ಪ, ರವಿಕುಮಾರ್, ಮಾಲತೇಶ್, ಎಂ.ಡಿ. ಹನುಮಂತಪ್ಪ, ಪೇಂಟರ್ ಹನುಮಂತಪ್ಪ, ರಾಮಪುರದ ರಮೇಶ್, ಕೆ.ನಾಗರಾಜ್, ಎಸ್.ಅಣ್ಣಪ್ಪ, ಎನ್. ಪ್ರಮೋದ್‍ಕುಮಾರ್, ಶಿವುಕುಮಾರ, ಪ್ರವೀಣ್, ಜಗದೀಶ್, ಗಣೇಶ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT