ಮಲೇಬೆನ್ನೂರು: ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ರೂಪಿಸಿದ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನ ಒದಗಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್

ಪಟ್ಟಣದ ಪುರಸಭಾ ಆವರಣದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 4 ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ಈಚೆಗೆ ವಿತರಿಸಿ ಶಾಸಕ ಬಿ.ಪಿ. ಹರೀಶ್ ಮಾತನಾಡಿದರು.

ಬಹುದಿನದಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ಅಂಗವಿಕಲರ ಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ ಪಡೆಯಲು ಯತ್ನಿಸಲಾಗುವುದು. ಫಲಾನುಭವಿಗಳು ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಸದುಪಯೋಗಪಡೆಸಿಕೊಳ್ಳಬೇಕು ಎಂದರು.

ಹಲವು ತಿಂಗಳಿಂದ ವಿತರಣೆಗಾಗಿ ಕಾದು ನಿಂತಿದ್ದ ತ್ರಿಚಕ್ರವಾಹನಗಳು ಕೊನೆಗೂ ಫಲಾನುಭವಿಗಳ ಕೈ ಸೇರಿದವು. ವಾಹನಗಳ ಕೀಲಿ ಕೈ ಪಡೆದು ಸವಾರಿ ಮಾಡಿದ ಫಲಾನುಭವಿಗಳಾದ ಮೊಹ್ಮದ್ ಅಲಿ, ಗಂಗಮ್ಮ, ಜಯಲಿಂಗಪ್ಪ, ಸಬರೀನ್ ತಾಜ್ ಮೊಗದಲ್ಲಿ ಮಂದಹಾಸ ಮೂಡಿತ್ತು.

ಪುರಸಭಾ ಪ್ರಭಾರಿ ಅಧ್ಯಕ್ಷೆ ಅಕ್ಕಮ್ಮ, ಮುಖ್ಯಾಧಿಕಾರಿ ರವಿಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಶಬ್ಬೀರ್ ಖಾನ್, ಅಂಗವಿಕಲರ ಸಂಘಟನೆಯ ಗಂಗಾಧರ್ ಪೂಜಾರ್ ಹಾಗೂ ಪದಾಧಿಕಾರಿಗಳು, ಪುರಸಭೆ ಸದಸ್ಯರು, ಕಚೇರಿ ಸಿಬ್ಬಂದಿ ಇದ್ದರು. ಹಿರಿಯ ಆರೋಗ್ಯ ನಿರೀಕ್ಷಕ ಶಿವರಾಜ್ ನಿರೂಪಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-32485639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.