ಮಲೇಬೆನ್ನೂರು: ‘ಹಣದಿಂದ ಮಾತ್ರ ಲೌಕಿಕ ಬದುಕು ಸಾಧ್ಯ ಎಂಬ ನಂಬಿಕೆ ಈಚೆಗೆ ಹೆಚ್ಚಾಗುತ್ತಿದೆ’ ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಜೋಡಿ ಆಂಜನೇಯ ದೇವಾಲಯದಲ್ಲಿ ಈಚೆಗೆ ಬಸವ ಜಯಂತ್ಯುತ್ಸವ ಹಾಗೂ ಸಾಮೂಹಿಕ ವಿವಾಹದ ಅಂಗವಾಗಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಮಾತನಾಡಿದರು.

ಹೊಲ, ತೋಟ ಮಾಡುವವರಿಗೆ ಹೆಣ್ಣು ಕೊಡುತ್ತಿಲ್ಲ. ವಧುವಿನ ಬೇಡಿಕೆಗಳ ಪಟ್ಟಿ ಬೆಳೆಯುತ್ತಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ ಎಂದರು.

ಬದುಕಿಗೆ ಶಾಂತಿ, ಸಮಾಧಾನ ಅಗತ್ಯ. ಹಾಗಾಗಿ ಸಾಮರಸ್ಯದ ಬದುಕು ಸಾಗಿಸಿ ಎಂದು ಖಂಡೇರಾಯನಹಳ್ಳಿ ನಾಗಾರಾಜಾನಂದ ಸ್ವಾಮೀಜಿ ಸಲಹೆ ನೀಡಿದರು

ಶಾಸಕ ಬಿ.ಪಿ. ಹರೀಶ್, ಬಿಜೆಪಿ ಮುಖಂಡ ಹನಗವಾಡಿ ವೀರೇಶ್ ಮಾತನಾಡಿದರು. ಕಣ್ಣಾಳ್ ಧರ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು.

ಪುರಸಭೆ ಪ್ರಭಾರ ಅಧ್ಯಕ್ಷೆ ಅಕ್ಕಮ್ಮ ಭಾನುವಳ್ಳಿ ಸುರೇಶ್, ಬಿ.ಎಂ. ವಾಗೀಶ್ ಸ್ವಾಮಿ, ಗಂಗೇನಳ್ಯಪ್ಪ, ಮುದೇಗೌಡ ಬಸವರಾಜಪ್ಪ, ಹನುಮಂತಪ್ಪ ಕಣ್ಣಾಳ್, ನಾಗರಾಜ್. ಕೆ. ಪುರಸಭೆ ಸದಸ್ಯ ಸಾಬೀರ್ ಅಲಿ, ಭಕ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-43-251294421

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.