ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಬೆನ್ನೂರು: 7 ಜಾನುವಾರು ರಕ್ಷಣೆ

Last Updated 28 ನವೆಂಬರ್ 2020, 5:54 IST
ಅಕ್ಷರ ಗಾತ್ರ

ಮಲೇಬೆನ್ನೂರು: ಇಲ್ಲಿನ ಬಸ್‌ ನಿಲ್ದಾಣದ ಹಿಂಭಾಗದ ಸಿದ್ದಿಕಿ ಮಸೀದಿ ರಸ್ತೆಯ ಕಸಾಯಿಖಾನೆಯಲ್ಲಿ ಕೂಡಿ ಹಾಕಿದ್ದ ಏಳು ಜಾನುವಾರನ್ನು ರಕ್ಷಿಸಿರುವ ಪೊಲೀಸರು ಒಬ್ಬನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪಟ್ಟಣದ ಮುನಾಫ್ ಸಾಬ್ ಬಂಧಿತ. ಪ್ರಕರಣ ಸಂಬಂಧ ಇಬ್ಬರು ಪರಾರಿಯಾಗಿದ್ದಾರೆ.

ಬೆಂಗಳೂರಿನ ಬೊಮ್ಮೇನಹಳ್ಳಿಯ ಗೌಗ್ಯಾನ್ ಫೌಂಡೇಷನ್‌ನಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಜಯ್‌ ಕುಲಕರ್ಣಿ ಅವರ ದೂರಿನ ಮೇರೆಗೆ ಸಂಘಟನೆಯ ಸದಸ್ಯರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ 7 ದನಗಳನ್ನು ವಶಪಡಿಸಿಕೊಂಡಿದ್ದಾರೆ. ‘ಇವುಗಳನ್ನು ವಧೆ ಮಾಡುವ ಉದ್ದೇಶದಿಂದ ಇಟ್ಟುಕೊಂಡಿದ್ದರು’ ಎಂದು ಸಂಜಯ್ ಕುಲಕರ್ಣಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಮಲೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT