ಮಲೇಬೆನ್ನೂರು: ‘ಆರೋಗ್ಯ ಹದಗೆಟ್ಟಾಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಿರಿ. ನಕಲಿ ನಾಟಿ ವೈದ್ಯರಿಂದ ಜನ ಆದಷ್ಟು ದೂರವಿರಬೇಕು’ ಎಂದು ಡಾ. ನವ್ಯಾ ಎಂ.ಆರ್. ಮನವಿ ಮಾಡಿದರು.

ಸಮೀಪದ ದೇವರ ಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಮಲೇರಿಯಾ ದಿನದ ಅಂಗವಾಗಿ ನಡೆದ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಲೇರಿಯಾ ಅಥವಾ ಯಾವುದೇ ತರಹರ ವೈರಾಣು ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಬಾಗಿಲಿಗೇ ಆಗಮಿಸಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಚಳಿ, ಜ್ವರ ಕಂಡು ಬಂದರೆ ರಕ್ತ ಪರೀಕ್ಷೆ ಅಗತ್ಯ. ರಕ್ತ ಪರೀಕ್ಷೆಯಲ್ಲಿ ಮಲೇರಿಯಾ ವೈರಾಣು ಕಂಡು ಬಂದರೆ ಮಾತ್ರ ಚಿಕಿತ್ಸೆ ನೀಡುತ್ತಾರೆ ಎಂದು ತಿಳಿಸಿದರು.

ಸೊಳ್ಳೆ ಅತ್ಯಂತ ಅಪಾಯಕಾರಿಯಾಗಿದ್ದು, ಅದರಿಂದ ಪಾರಾಗಲು ಮುಖ್ಯವಾಗಿ ಪರಿಸರ ಸಂರಕ್ಷಣೆಗೆ ಗಮನ ಹರಿಸಬೇಕು. ಮನೆಯ ಸುತ್ತಮತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮ್ಮಣ್ಣ ಸಲಹೆ ನೀಡಿದರು.

ತಾಲ್ಲೂಕು ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್ ಮಾತನಾಡಿದರು.

ಆರೋಗ್ಯ ಸುರಕ್ಷಾಧಿಕಾರಿ ನಯನ ರೆಡ್ಡಿ, ಲಕ್ಷ್ಮಿ, ಆರೋಗ್ಯ ನಿರೀಕ್ಷಣಾಧಿಕಾರಿ ಆದರ್ಶ, ರೇಖಾ, ಸಮುದಾಯ ಆರೋಗ್ಯ ಅಧಿಕಾರಿ ಮಹಮ್ಮದ್ ಇಮ್ರಾನ್. ಅಕ್ಷತಾ, ಪೂಜಾ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-43-96439404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.