ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ ಜ್ವರ ನಿಯಂತ್ರಿಸಲು ಸಹಕರಿಸಿ

Published 25 ಜುಲೈ 2023, 13:26 IST
Last Updated 25 ಜುಲೈ 2023, 13:26 IST
ಅಕ್ಷರ ಗಾತ್ರ

ಮಲೇಬೆನ್ನೂರು: ಗ್ಯಾರೇಜ್‌ಗಳ ಮಾಲೀಕರು ಹಾಗೂ ಗುಜರಿ ವ್ಯಾಪಾರಿಗಳು ಡೆಂಗಿ ಜ್ವರಕ್ಕೆ ಕಾರಣವಾಗುವ ಸೊಳ್ಳೆಗಳ ಉತ್ಪತ್ತಿಗೆ ಅವಕಾಶ ನೀಡದಿರಲು ಗುಜರಿ ವಸ್ತುಗಳನ್ನು ತಾಡಪಾಲ್‌ನಿಂದ ಮುಚ್ಚಬೇಕು ಮತ್ತು ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ ತಾಕೀತು ಮಾಡಿದರು.

ಪುರಸಭೆ ಸಭಾಂಗಣದಲ್ಲಿ ಡೆಂಗಿ ಜ್ವರದ ಬಗ್ಗೆ ಮಂಜಾಗ್ರತಾ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಮನೆ ಒಳಗೆ ಮತ್ತು ಚಾವಣಿಯ ನೀರಿನ ತೊಟ್ಟಿ, ಬ್ಯಾರಲ್ ಅನ್ನು ತಪ್ಪದೇ ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ನೀರು ಭರ್ತಿ ಮಾಡಿ ಭದ್ರವಾಗಿ ಮುಚ್ಚಳದಿಂದ ಮುಚ್ಚಬೇಕು. ಒಡೆದ ಬಾಟಲಿ, ಟಿನ್‌, ಟೈರ್‌ ಇತ್ಯಾದಿಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ದಾದಾಪೀರ್, ಪರಿಸರ ಎಂಜಿನಿಯರ್ ಉಮೇಶ್ ಮಾತನಾಡಿದರು.

ಸಮುದಾಯ ಸಂಘಟನಾಧಿಕಾರಿ ದಿನಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಕಿರಣ್, ಶಿವರಾಜ್, ಪುರಸಭೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗ್ಯಾರೇಜ್ ಮತ್ತು ಗುಜರಿ ವ್ಯಾಪಾರಸ್ಥರು ಮತ್ತು ಮಾಲೀಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT