ಜಗಳೂರು: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಭಾನುವಾರ ಕಮ್ಮವಾರಿ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಏಕಾದಶ ರುದ್ರಾಭಿಷೇಕ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.

ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಕಮ್ಮವಾರಿ ಸಮಾಜದ ಮಹಿಳೆಯರು, ಮಕ್ಕಳು ಹಾಗೂ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನಡೆದವು.

ಸತ್ಯನಾರಾಯಣ ಸ್ವಾಮಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದಿನವಿಡೀ ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಸತ್ಯನಾರಾಯಣ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಭಕ್ತಸಮೂಹ ಸಾಮೂಹಿಕವಾಗಿ ಪಂಕ್ತಿಯಲ್ಲಿ ಕುಳಿತು ಪ್ರಸಾದ ಸ್ವೀಕರಿಸಿತು. ಗ್ರಾಮದ ಮನೆಗಳನ್ನು ತಳಿರು ತೋರಣ, ರಂಗೋಲಿಯಿಂದ ಅಲಂಕರಿಸಲಾಗಿತ್ತು. ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.

ತಾಲ್ಲೂಕಿನ ತೊರೆಸಾಲು ಭಾಗದ ಸಿದ್ದಿಹಳ್ಳಿ, ಮಲ್ಲಾಪುರ, ಕಮಂಡಲಗೊಂದಿ, ಚಿಕ್ಕ ಮಲ್ಲನಹೊಳೆ, ಹಿರೇಮಲ್ಲನಹೊಳೆ, ಹುಚ್ಚವ್ವನಹಳ್ಳಿ, ಮಲ್ಲಾಪುರ ಸೇರಿದಂತೆ ದಾವಣಗೆರೆ, ಚಿತ್ರದುರ್ಗ ಭಾಗದ ಕಮ್ಮವಾರಿ ಸಮಾಜದ ಸದಸ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-43-1606310657

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.