ಮಲ್ಲಿಗೇನಹಳ್ಳಿ(ನ್ಯಾಮತಿ): ‘ರಾಜ್ಯ ಸರ್ಕಾರದ ಯೋಜನೆಯಾದ ಪಂಚ ಗ್ಯಾರಂಟಿಯನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ’ ಎಂದು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ ಹೇಳಿದರು.

ನ್ಯಾಮತಿ ತಾಲ್ಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕ, ತಾಲ್ಲೂಕು ಘಟಕ, ದಾವಣಗೆರೆ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಟಿಸಿ ಅವರು ಮಾತನಾಡಿದರು.

‘ಗ್ರಾಮದ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಹಣವನ್ನು ಕ್ರೋಢೀಕರಿಸಿ ಆಂಜನೇಯಸ್ವಾಮಿ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಕೊಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಗೃಹಲಕ್ಷ್ಮಿ ಹಣದಿಂದ ಕುಟುಂಬ ನಿರ್ವಹಣೆಯೊಂದಿಗೆ ಸಮಾಜಮುಖಿ ಕೆಲಸಕ್ಕೆ ಬಳಸುತ್ತಿರುವುದು ಶ್ಲಾಘನೀಯ’ ಎಂದರು.

ದಾವಣಗೆರೆ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜನಾಯ್ಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಸದಸ್ಯ ಗಿರೀಶ, ತಾಲ್ಲೂಕು ಘಟಕದ ಸದಸ್ಯ ಬೆಳಗುತ್ತಿ ಎಸ್.ಕೆ.ತೀರ್ಥಲಿಂಗಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಜಿ.ಬಸವರಾಜಪ್ಪ, ಕಾರ್ಯದರ್ಶಿ ಜಿ.ಎಚ್.ಪರಮೇಶ್ವರಪ್ಪ, ಸಿಡಿಪಿಒ ಎಸ್.ಎಸ್.ಜ್ಯೋತಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಲ್.ನಾಗರಾಜ, ಮಾಜಿ ಸದಸ್ಯರಾದ ಹನುಮಂತಪ್ಪ, ಯಶೋದಮ್ಮ, ಪಿಡಿಒ ಮಂಜುನಾಥಚಾರಿ ಮತ್ತು ಸಿಬ್ಬಂದಿ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.