ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡದಲ್ಲಿ ಮುಳುಗಿ ವ್ಯಕ್ತಿ ಸಾವು; ಕೊಲೆ ಆರೋಪ

Published 18 ಏಪ್ರಿಲ್ 2024, 6:33 IST
Last Updated 18 ಏಪ್ರಿಲ್ 2024, 6:33 IST
ಅಕ್ಷರ ಗಾತ್ರ

ದಾವಣಗೆರೆ: ತಾಲ್ಲೂಕಿನ ಹುಲಿಕಟ್ಟೆ ಗ್ರಾಮದಲ್ಲಿ ಈಚೆಗೆ ಕೃಷಿ ಹೊಂಡದ ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಕಲ್ಲೇಶ್ (33)ಮೃತರು.

ಈಜು ಬರುವುದಿಲ್ಲ ಎಂಬುದು ಗೊತ್ತಿದ್ದರೂ, ಕೊಲೆ ಮಾಡುವ ಉದ್ದೇಶದಿಂದ ನೀರಿನಲ್ಲಿ ತಳ್ಳಿದ್ದಾರೆ. ಕಲ್ಲೇಶ್ ಸಾವಿನ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಮೃತರ ಪತ್ನಿ ಅಶ್ವಿನಿ ದೂರು ನೀಡಿದ್ದಾರೆ. ಆರೋಪಿಗಳಾದ ಶರತ್, ನವೀನ್, ಕೊಟ್ರೇಶ, ನವೀನ್ ಮಹೇಶ್ವರಪ್ಪ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಕೆಟ್‌ ಬೆಟ್ಟಿಂಗ್‌; ₹ 21,000 ವಶ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದ ಬಳಿಯ ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ₹ 21,000 ಜಪ್ತಿ ಮಾಡಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಗೆರೆ ಗ್ರಾಮದ ಪ್ರದೀಪ ಅಲಿಯಾಸ್‌ ಗೂಳಿ ಪ್ರದೀಪ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಸ್ಪರ್ಶ: ಬಾಲಕ ಸಾವು

ಗಂಗಾವತಿ (ಕೊಪ್ಪಳ ಜಿಲ್ಲೆ): ವಿದ್ಯುತ್ ಸ್ಪರ್ಶದಿಂದ ಬಾಲಕನೊಬ್ಬ ಮೃತಪಟ್ಟ ಘಟನೆ ನಗರದಲ್ಲಿ ಬುಧವಾರ ನಡೆದಿದೆ.

ದಾವಣಗೆರೆಯ ವಿಜಯನಗರ ಬಡಾವಣೆಯ ನಿವಾಸಿ ಶಾಂತಕುಮಾರ್ ಎಂಬುವರ ಪುತ್ರ ಹೇಮಂತ್ ಕುಮಾರ್ (12) ಮೃತ ಬಾಲಕ. ಶಾಲೆಗೆ ರಜೆ ಇರುವ ಕಾರಣ ಗಂಗಾವತಿ ನಗರದಲ್ಲಿನ ಅಜ್ಜಿಯ ಮನೆಗೆ ಬಾಲಕ ಬಂದಿದ್ದ. 

ನಗರದ ನೀಲಾ ಬೇಕರಿ ಹಿಂಬದಿಯ ಸವಿತಾ ಕಾಲೊನಿಯಲ್ಲಿರುವ ಮನೆಯಲ್ಲಿ ಸ್ನಾನಕ್ಕೆಂದು ಹಾಕಿದ್ದ ಗೀಸರ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ.

ಕುಟುಂಬಸ್ಥರು ಬಾಲಕನ ಮೃತದೇಹವನ್ನು ದಾವಣಗೆರೆಗೆ ಕೊಂಡೊಯ್ದರು. ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT