ಮಂಗಳವಾರ, ಡಿಸೆಂಬರ್ 10, 2019
20 °C

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದವನಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚನ್ನಗಿರಿ ಪಟ್ಟಣದ ನಿವಾಸಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಚನ್ನಗಿರಿ ಪಟ್ಟಣದ ಲಷ್ಕರ್ ಮೊಹಲ್ಲಾದ ನಿವಾಸಿ ಜಾಫರ್ (45) ಶಿಕ್ಷೆಗೆ ಗುರಿಯಾದ ಆರೋಪಿ. ಕಳೆದ 2018ರ ಡಿಸೆಂಬರ್ ತಿಂಗಳಲ್ಲಿ ಶಿಕ್ಷಕಿಯಾಗಿರುವ ತಾಯಿ ತನ್ನ ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದರು. ಆ ವೇಳೆ ಈತ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು.

ಚನ್ನಗಿರಿ ಠಾಣೆಯ ಎಸ್‌ಐ ಶಿವರುದ್ರಪ್ಪ ಎಸ್‌.ಮೇಟಿ ದೂರು ದಾಖಲಿಸಿಕೊಂಡಿದ್ದರು. ಸರ್ಕಲ್ ಇನ್‌ಸ್ಪೆಕ್ಟರ್ ಆರ್‌.ಆರ್. ಪಾಟೀಲ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ನಾಗಶ್ರೀ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹ 35 ಸಾವಿರ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಶೌಕತ್‌ ಅಲಿ ಎಸ್‌.ಎಚ್.ಎಸ್. ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)