ಶನಿವಾರ, ಅಕ್ಟೋಬರ್ 23, 2021
21 °C

ನರೇಗಾ ಕೂಲಿ ಹಣ ಹೆಚ್ಚಳಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಾಮೂಹಿಕ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಕಾಮಗಾರಿಯ ಕೂಲಿ ಹಣದ ಮೊತ್ತವನ್ನು ಹೆಚ್ಚಿಸುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕುಂಟೆ ಗ್ರಾಮದ ಕೂಲಿಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮೂಹಿಕವಾಗಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದ್ದಾರೆ.

ನರೇಗಾ ಯೋಜನೆಯಡಿ ಮಾನವ ದಿನಗಳನ್ನು 100 ದಿನಗಳಿಂದ 200 ದಿನಗಳಿಗೆ ಹೆಚ್ಚಿಸುವುದು, ಜಾತಿ ಆಧಾರದಲ್ಲಿ ಕೂಲಿ ಹಣ ಪಾವತಿ ಮಾಡುವುದನ್ನು ಬಿಟ್ಟು ಎ್ಲಲರಿಗೂ ಸಮಾನವಾಗಿ ಪಾವತಿ ಮಾಡುವುದು ಹಾಗೂ ಕನಿಷ್ಠ ಕೂಲಿ ಮೊತ್ತವನ್ನು
₹ 600ಕ್ಕೆ ಹೆಚ್ಚಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಕೂಲಿಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು