ಶನಿವಾರ, ಆಗಸ್ಟ್ 8, 2020
23 °C
ರಾಜನಹಳ್ಳಿಯಿಂದ ರಾಜಧಾನಿಗೆ ಹೊರಟ ಪಾದಯಾತ್ರೆ

ಮೀಸಲಾತಿ ಹೆಚ್ಚಳ ಹೋರಾಟಕ್ಕೆ ಭಾರಿ ಜನ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಮೀಸಲಾತಿ ಪ್ರಮಾಣವನ್ನು ಶೇ 7.5ರಷ್ಟು ಹೆಚ್ಚಿಸಬೇಕು ಎಂದು ಆಗ್ರಹಿಸಿ ‘ರಾಜಧಾನಿಯಿಂದ ರಾಜನಹಳ್ಳಿವರೆಗೆ’ ಹಮ್ಮಿಕೊಂಡಿದ್ದ ಬೃಹತ್‌ ಪಾದಯಾತ್ರೆಗೆ ಭಾರಿ ಜನ ಬೆಂಬಲ ವ್ಯಕ್ತವಾಯಿತು.

ಬಳ್ಳಾರಿ, ಹಾವೇರಿ, ದಾವಣಗರೆ, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಮಾಜದ ಮುಖಂಡರು ಮೀಸಲಾತಿಗಾಗಿ ಒಕ್ಕೊರಲಿನಿಂದ ಆಗ್ರಹಿಸಿದರು.

‘ಮೀಸಲಾತಿ ಭಿಕ್ಷೆಯಲ್ಲ, ‘ಸಂವಿಧಾನದ ಹಕ್ಕು’, ‘ನಕಲಿ ಜಾತಿ ಪ್ರಮಾಣ ಪತ್ರ ತಡೆಗೆ ಆಗ್ರಹ’ ‘ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಹೋರಾಟ’ ‘ಜಾತಿ ಪದ್ಧತಿ ಇರುವವರೆಗೂ ಮೀಸಲಾತಿ ಬೇಕು’, ‘ಯಾವುದೇ ಜಾತಿಯ ವಿರುದ್ಧ ನಮ್ಮ ಹೋರಾಟವಲ್ಲ’ ಎಂಬ ನಾಮಫಲಕಗಳು ರಾರಾಜಿಸಿದವು.

ಮಠದ ಆವರಣದಲ್ಲಿರುವ ಪುಣ್ಯಾನಂದಪುರಿ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸುವ ಪ್ರಸನ್ನಾನಂದಪುರಿ ಸ್ವಾಮೀಜಿ ನಂತರ ಮಠದ ದ್ವಾರದಲ್ಲಿ ಟೇಪ್‌ ಕತ್ತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.

ಪಾದಯಾತ್ರೆಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ.  ಕೇಂದ್ರದಿಂದ ಸಿಗುವ ಮೀಸಲಾತಿ ಸಿಕ್ಕಿದ್ದು, ರಾಜ್ಯ ಸರ್ಕಾರ ಶೇ 7.5ರಷ್ಟು ಮೀಸಲಾತಿ ನೀಡಿಲ್ಲ.  ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಈಗಾಗಲೇ ಮನವಿ ಸಲ್ಲಿಸಿದ್ದು, ಮುಂದಿನ ಹಂತವಾಗಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ  ಎಂದು ಹೇಳಿದರು.

‘16 ದಿವಸ ನಡೆಯುವ ಈ ಪಾದಯಾತ್ರೆ ಜೂನ್‌ 24ರಂದು ಬೆಂಗಳೂರಿಗೆ ತಲುಪಲಿದೆ. 25ರಂದು ವಿಧಾನಸೌಧದ ಬಳಿ ಇರುವ ವಾಲ್ಮೀಕಿ ಪ್ರತಿಭಟನೆಗೆ ಮಾಲಾರ್ಪಣೆ ಮಾಡಿ ಫ್ರೀಡಂ ಪಾರ್ಕ್‌ನಲ್ಲಿ ಚಳವಳಿ ನಡೆಸಲಾಗುವುದು. ನಮ್ಮ ಬೇಡಿಕೆಗಳಿ ಸ್ಪಂದಿಸಿದರೆ ಒಳ್ಳೆಯದು ಇಲ್ಲದಿದ್ದರೆ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ’ ಎಂದು ಹೇಳಿದರು.

ಮೊಳಕಾಲ್ಮುರು ಶಾಸಕ ಬಿ. ಶ್ರೀರಾಮುಲು ಮಾತನಾಡಿ, ‘ಮೀಸಲಾತಿ ಹೆಚ್ಚಳಕ್ಕೆ ಅನೇಕ ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಮ್ಮಿಶ್ರ ಸರ್ಕಾರದಿಂದ ಪರಿಶಿಷ್ಟ ಪಂಗಡದ ಮೀಸಲಾತಿ ತಪ್ಪಿಸುವ ಷಡ್ಯಂತ್ರ ನಡೆಯುತ್ತಿದ್ದು, ಮೀಸಲಾತಿ ಸಿಗುವ ತನಕ ಹೋರಾಟ ನಡೆಸುತ್ತೇವೆ. ಸಮಾಜದ ಹೋರಾಟದಲ್ಲಿ ಜಯಶೀಲರಾಗುವುದು’ ನಮ್ಮ ಗುರಿ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು