ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧಾಪ್ಯದಲ್ಲಿ ತಂದೆ-ತಾಯಿಯರಿಗೆ ಆಸರೆಯಾಗಲಿ ರಾಜನಹಳ್ಳಿ ಜಿ.ಶ್ರೀನಿವಾಸಮೂರ್ತಿ

Published 25 ಫೆಬ್ರುವರಿ 2024, 5:06 IST
Last Updated 25 ಫೆಬ್ರುವರಿ 2024, 5:06 IST
ಅಕ್ಷರ ಗಾತ್ರ

ದಾವಣಗೆರೆ: ವೃದ್ಧಾಪ್ಯದಲ್ಲಿ ಮಕ್ಕಳು ತಂದೆ-ತಾಯಿಯರನ್ನು ಪ್ರೀತಿಯಿಂದ ನೋಡಿಸುವ ಅವರ ಬದುಕಿಗೆ ಆಸರೆಯಾಗಬೇಕೆಂದು ಆರ್‍ಜಿಎಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಜನಹಳ್ಳಿ ಜಿ.ಶ್ರೀನಿವಾಸಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಪ್ರಶಾಂತಿ ಸಭಾಂಗಣದಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಪಾದಪೂಜೆ ನೇರವೇರಿಸುವ ‘ಮಾತಾ-ಪಿತೃ ವಂದನಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇದೊಂದು ಹೃದಯಸ್ಪರ್ಶಿ ಕಾರ್ಯಕ್ರಮ. ಪೋಷಕರಿಗೆ ಪಾದಪೂಜೆ ನೆರವೇರಿಸುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಆದರೆ ಈಶ್ವರಮ್ಮ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಈ ಅದೃಷ್ಟ ದೊರೆತಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇದೊಂದು ಜೀವನದ ತಿರುವಿನ ಅಂಶವಾಗಿದೆ’ ಎಂದರು.

ವಾಸವಿ ಮಹಿಳಾ ಮತ್ತು ಯುವತಿಯರ ಸಂಘದ ಅಧ್ಯಕ್ಷೆ ಹೇಮಾ ಶ್ರೀನಿವಾಸ ಮಾತನಾಡಿ, ‘ಮಕ್ಕಳು ತಪ್ಪು ಮಾಡುವುದು ಸಹಜ. ಭಾರತೀಯ ಸಂಸ್ಕೃತಿಯಲ್ಲಿ ತಂದೆ-ತಾಯಿಗಳ ಪಾದಕ್ಕೆ ನಮಸ್ಕರಿಸಿ, ಕ್ಷಮೆ ಕೋರುವುದು ವಿಭಿನ್ನವಾಗಿದೆ. ಮಕ್ಕಳು ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು, ಚೆನ್ನಾಗಿ ಓದಿ ಹೆಚ್ಚು ಅಂಕಗಳನ್ನು ಗಳಿಸಬೇಕೆಂಬುದು ಪ್ರತಿಯೊಬ್ಬ ತಂದೆ-ತಾಯಿಯರ ಆಸೆಯಾಗಿರುತ್ತದೆ. ಮಕ್ಕಳು ಸಂಸ್ಕಾರವಂತರಾಗಿ ಪೋಷಕರ ಆಸೆಯನ್ನು ನೇರವೇರಿಸಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ಕೆ.ಆರ್.ಸುಜಾತ ಕೃಷ್ಣ, ‘ಯಾರು ತಂದೆ-ತಾಯಿಗಳನ್ನು ಗೌರವಿಸುತ್ತಾರೋ, ಅವರನ್ನು ಎಲ್ಲರೂ ಗೌರವಿಸುತ್ತಾರೆ. ನಿಸ್ವಾರ್ಥ ಪ್ರೇಮವನ್ನು ತಂದೆ-ತಾಯಿಗಳಲ್ಲಿ ಮಾತ್ರ ನೋಡಲು ಸಾಧ್ಯ. ತಂದೆ-ತಾಯಿ ಗುರುಗಳನ್ನು ಗೌರವಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈಶ್ವರಮ್ಮ ಶಾಲಾ ಆಡಳಿತ ಮಂಡಳಿ ಸದಸ್ಯೆ ಕೆ.ವಿ.ಸುಜಾತ, ಕಾರ್ಯದರ್ಶಿ ಎ.ಆರ್.ಉಷಾ ರಂಗನಾಥ್, ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಶಶಿರೇಖಾ ಸೇರಿದಂತೆ ಸಹ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT