ಶುಕ್ರವಾರ, ನವೆಂಬರ್ 27, 2020
23 °C
ಮೇಯರ್ ಅಜಯ್‍ಕುಮಾರ್ ಭರವಸೆ

ದಾವಣಗೆರೆ: ಬನಶಂಕರಿ ಬಡಾವಣೆ ಅಭಿವೃದ್ಧಿಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ವಿವಿಧ ಸಮಸ್ಯೆ ಎದುರಿಸುತ್ತಿರುವ ನಗರದ ಬೈಪಾಸ್ ರಸ್ತೆ ಪಕ್ಕದ ಬನಶಂಕರಿ ಬಡಾವಣೆಗೆ ಮೇಯರ್ ಅಜಯ್‍ಕುಮಾರ್ ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.

‘ಬಡಾವಣೆಯನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವಿದ್ದು, ಶೀಘ್ರ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇನೆ’ ಎಂದು ಅಜಯ್‌ಕುಮಾರ್‌ ಹೇಳಿದರು.

ಬನಶಂಕರಿ ಬಡಾವಣೆ ಶಾಮನೂರು ಹಾಗೂ ಶಿರಮನಗೊಂಡನಹಳ್ಳಿಯವರೆಗೆ ಹಬ್ಬಿದ್ದು, ಇದು ಎರಡನೇ ದಾವಣಗೆರೆ ಇದ್ದಂತೆ. ಬಡಾವಣೆಯಲ್ಲಿ ‌ರಸ್ತೆಗಳ ಡಾಂಬರೀಕರಣ, ಕಾಂಕ್ರೀಟ್‌ ರಸ್ತೆ ನಿರ್ಮಾಣ, ಬೀದಿ ದೀಪಗಳ ಅಳವಡಿಕೆ, ಬಡಾವಣೆಯ ಮೂರು ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪಾಸಿಂಗ್ ರಸ್ತೆಯಿಂದ ಸಂಪರ್ಕ ರಸ್ತೆ ನಿರ್ಮಾಣ, ಉದ್ಯಾನದ ಅಭಿವೃದ್ದಿ, ರಸ್ತೆಯ ಅಕ್ಕಪಕ್ಕ ಬೆಳೆದ ಗಿಡಗಳ ತೆರವು, ಒಳಚರಂಡಿ ದುರಸ್ತಿ, ಬಡಾವಣೆಯಲ್ಲಿನ ಕ್ರಾಸ್‍ಗಳಿಗೆ ನಾಮಫಲಕ ಹಾಕಿಸುವುದು ಸೇರಿ ಹಲವು ಅಭಿವೃದ್ಧಿ ಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.

ಉಪ ಮೇಯರ್ ಸೌಮ್ಯಾ ನರೇಂದ್ರಕುಮಾರ್‌, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಟಿ. ವೀರೇಶ್, ಪ್ರಸನ್ನ ಕುಮಾರ್, ಗೌರಮ್ಮ ಗಿರೀಶ್, ಜಯಮ್ಮ ಗೋಪಿನಾಯ್ಕ್, ಪಾಲಿಕೆ ಸದಸ್ಯರಾದ ನಾಗರಾಜ್, ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಬಡಾವಣೆ ಸಮಿತಿ ಅಧ್ಯಕ್ಷ ಶಿವಕುಮಾರ್ ಸೇರಿ ಸ್ಥಳೀಯರು, ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.