ದಾವಣಗೆರೆ: ಜಿಲ್ಲೆಯಲ್ಲಿ ಸೆ. 17ರಂದು ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದೆ. 1 ಲಕ್ಷ ಜನರಿಗೆ ಕೊರೊನಾ ವ್ಯಾಕ್ಸಿನ್ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಲಸಿಕೆ ನೀಡುವ ಸಂಬಂಧ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನೂರು ಆರೋಗ್ಯ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಪಿಎಚ್‌ಸಿ, ಸಿಎಚ್‌ಸಿ, ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ, ಇಎಸ್ಐ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು ಎಂದರು.

ಅಂದು ಬೆಳಿಗ್ಗೆ 8ಕ್ಕೆ ಲಸಿಕೆ ಮೇಳ ಆರಂಭಗೊಳ್ಳುತ್ತದೆ. ಪ್ರತಿ 2 ಗಂಟೆಗೊಮ್ಮೆ ಮಾಹಿತಿ ತೆಗೆದುಕೊಳ್ಳಲಾಗುವುದು. ಹರಿಹರದ 31 ವಾರ್ಡ್‌ಗಳಲ್ಲಿ 31 ತಂಡಗಳು ಹಾಗೂ ದಾವಣಗೆರೆ ನಗರದ 45 ವಾರ್ಡ್‌ಗಳಲ್ಲಿ 45 ತಂಡಗಳು ಕಾರ್ಯ ನಿರ್ವಹಿಸಲಿವೆ. ಜಿಲ್ಲೆಯ 195 ಗ್ರಾಮ ಪಂಚಾಯಿತಿಗಳ ಕೇಂದ್ರ ಸ್ಥಾನಗಳಲ್ಲಿ 1 ತಂಡ ಕನಿಷ್ಠ 200 ಜನರಿಗೆ ಲಸಿಕೆ ನೀಡಲಿದೆ. ಈ ಸಂಬಂಧ ಈಗಾಗಲೇ ಎಲ್ಲ ತಹಶೀಲ್ದಾರ್, ಇಒ, ಟಿ.ಎಚ್.ಒ, ಸಿಡಿಪಿಒಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಮಟ್ಟದ ತರಬೇತಿ ಸೆ.15ರಂದು ನಡೆಯಲಿದೆ. ಎಲ್ಲ ಬಿಎಲ್ಒಗಳು ತಮ್ಮ ವ್ಯಾಪ್ತಿಯಲ್ಲಿ ಲಸಿಕೆ ಪಡೆದುಕೊಳ್ಳದವರ ಪಟ್ಟಿ ತಯಾರಿಸಲಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಟೊ ಮೂಲಕ ಪ್ರಚಾರ, ನಗರದಲ್ಲಿ ಕಸದ ಗಾಡಿಗಳಲ್ಲಿ ಪ್ರಚಾರ ವ್ಯವಸ್ಥೆ ಮಾಡಲಾಗುವುದು. ಹಳ್ಳಿಗಳಲ್ಲಿ ಡಂಗೂರ ಬಾರಿಸಲು ಸೂಚಿಸಲಾಗಿದೆ ಎಂದರು

ದುಡಿಯುವ ಜನರಿರುವ ಪ್ರದೇಶಗಳಲ್ಲಿ, ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ, ಬಡ ಜನರು ವಾಸಿಸುವ ಕಡೆಗಳಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಹೆಚ್ಚಿನ ಪ್ರಚಾರ ನಡೆಸಲಾಗುವುದು ಎಂದು ತಿಳಿಸಿದರು.

ಈ ಹಿಂದೆ ವ್ಯಾಕ್ಸಿನ್‌ಗೆ ವಿರೋಧ ಮಾಡಿದ್ದ ಜಾಗಗಳಲ್ಲಿ ಜನರ ಮನವೊಲಿಸಲಾಗುವುದು. ತಾಲ್ಲೂಕು ಹಂತದಲ್ಲಿ ವಿವಿಧ ಸ್ವಯಂ ಸೇವಾ ಸಂಸ್ಥೆಗಳಾದ ರೋಟರಿ, ಲಯನ್ಸ್, ರೆಡ್ ಕ್ರಾಸ್‌ನಂತಹ ಸಂಸ್ಥೆಗಳು ಕೈ ಜೋಡಿಸಲಿವೆ. ಒಂದು ರೀತಿ ಚುನಾವಣೆ ನಡೆಸಿದ ರೀತಿಯಲ್ಲಿಯೇ ವ್ಯಾಕ್ಸಿನ್ ಮೇಳ ಯಶಸ್ವಿಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ ದಾನಮ್ಮನವರ್, ಎಡಿಸಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿಎಚ್ಒ ಡಾ. ನಾಗರಾಜ್, ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ, ಡಾ.ಕಾಳಪ್ಪನವರ್, ಡಾ.ಕುಮಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.