ಮಂಗಳವಾರ, ಸೆಪ್ಟೆಂಬರ್ 21, 2021
22 °C
ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಆಗ್ರಹ

ಬೇಡಿಕೆಗಳ ಈಡೇರಿಕೆಗೆ ಬಿಸಿಯೂಟ ತಯಾರಕರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಗಿರಿ: ಅನುದಾನಿತ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರಿಗೆ ಗೌರವ ಸಂಭಾವನೆ ಹೆಚ್ಚಳ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ತಾಲ್ಲೂಕು ಘಟಕದ ಕಾರ್ಯಕರ್ತರು ಗರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಬಿಸಿಯೂಟ ತಯಾರಕರಿಗೆ ಜೂನ್ ಮತ್ತು ಜುಲೈ ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅಡುಗೆಯವರಿಗೆ ₹ 2,700 ಹಾಗೂ ಸಹಾಯಕರಿಗೆ ₹ 2,600 ವೇತನ ನೀಡುತ್ತಿದ್ದು, ಇಷ್ಟು ವೇತನದಲ್ಲಿ ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಜೀವನ ನಿರ್ವಹಣೆ ಮಾಡುವುದು ತುಂಬಾ ಕಷ್ಟಕರ. ಆದ್ದರಿಂದ ಕನಿಷ್ಠ ವೇತನ ನಿಗದಿಪಡಿಸಬೇಕು. ಅಸಂಘಟಿತ ಕಾರ್ಮಿಕರಿಗೆ ನೀಡಿದಂತೆ ₹ 5 ಸಾವಿರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿ ಶಾಲೆಯಲ್ಲಿ ಇಬ್ಬರು ಅಡುಗೆ ತಯಾರಕರನ್ನು ನೇಮಿಸಬೇಕು. ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಬಾರದು. ಬಿಸಿಯೂಟ ತಯಾರಕರ ಕೆಲಸವನ್ನು ಕಾಯಂಗೊಳಿಸಬೇಕು. ಎಲ್‌ಐಸಿ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತರಬೇಕು. 60 ವರ್ಷ ವಯಸ್ಸಾದವರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ₹ 2 ಲಕ್ಷ ಇಡುಗಂಟು ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪಟ್ಟಣದ ತಾಲ್ಲೂಕು ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ತಹಶೀಲ್ದಾರ್‌ ಪಟ್ಟರಾಜಗೌಡ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಅವರೆಗೆರೆ ಚಂದ್ರು, ಜಿಲ್ಲಾ ಸಂಚಾಲಕ ಸಿ. ರಮೇಶ್, ತಾಲ್ಲೂಕು ಅಧ್ಯಕ್ಷೆ ಮಂಗಳಬಾಯಿ, ಎನ್. ಗೀತಮ್ಮ, ಸುಮ, ಕಮಲಮ್ಮ, ಸರೋಜಾ, ರುದ್ರಮ್ಮ, ಚಂದ್ರಮ್ಮ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು