ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಇಫ್ತಾರ್‌ ಕೂಟ: ಶಾಮನೂರು, ಸಚಿವ ಮಲ್ಲಿಕಾರ್ಜುನ್‌ ಭಾಗಿ

Published 10 ಏಪ್ರಿಲ್ 2024, 14:34 IST
Last Updated 10 ಏಪ್ರಿಲ್ 2024, 14:34 IST
ಅಕ್ಷರ ಗಾತ್ರ

ದಾವಣಗೆರೆ: ಹಳೇ ದಾವಣಗೆರೆಯ ಬಾಷಾ ನಗರದಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ ಜನಾಬ್ ಸೈಯದ್ ಸೈಫುಲ್ಲಾ ಸಾಬ್ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದ್ದ ಇಫ್ತಾರ್ ಕೂಟದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಪಾಲ್ಗೊಂಡಿದ್ದರು.  

ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಸೈಫುಲ್ಲಾ ಸಾಬ್ ನಿವಾಸದಲ್ಲಿ ಪ್ರತಿ ವರ್ಷವೂ ಇಫ್ತಾರ್‌ ಆಯೋಜಿಸಲಾಗುತ್ತದೆ. ಇದರಲ್ಲಿ ಮುಸ್ಲಿಂ ಬಾಂಧವರ ಜೊತೆಗೆ ಇತರೆ ಧರ್ಮದವರೂ ಪಾಲ್ಗೊಳ್ಳುತ್ತಾರೆ. 

‘ಯುಗಾದಿ ಹಾಗೂ ರಂಜಾನ್ ಹಬ್ಬಗಳು ಒಟ್ಟೊಟ್ಟಾಗಿ ಬಂದಿವೆ. ಎಲ್ಲರೂ ಶಾಂತಿ, ಸೌಹಾರ್ದತೆ ಹಾಗೂ ಸಂತಸದಿಂದ ಹಬ್ಬ ಆಚರಿಸೋಣ’ ಎಂದು ಸಚಿವ ಮಲ್ಲಿಕಾರ್ಜುನ್‌ ಹೇಳಿದರು. 

ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲೀದ್ ಅಹ್ಮದ್, ಮಹಾನಗರ ಪಾಲಿಕೆ ಸದಸ್ಯ ಕೆ. ಚಮನ್ ಸಾಬ್, ನಿಖಿಲ್ ಕೊಂಡಜ್ಜಿ, ಧರ್ಮಗುರುಗಳು ಹಾಗೂ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT