ಸೋಮವಾರ, ಮೇ 17, 2021
21 °C

ದಾವಣಗೆರೆ: ಜಿಲ್ಲಾ ಆಸ್ಪತ್ರೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಬುಧವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಚಿಕಿತ್ಸೆ ಮತ್ತು ಇತರೆ ನಿರ್ವಹಣೆ ವ್ಯವಸ್ಥೆಯಯನ್ನು ಪರಿಶೀಲಿಸಿದರು. ರೋಗಿಗಳೊಂದಿಗೆ ಸಂವಾದ ನಡೆಸಿದರು. ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಾಲಿಗೆ ಏಟಾದ, ಜಾಂಡಿಸ್ ರೋಗಕ್ಕೆ ತುತ್ತಾದ ಹೀಗೆ ವಿವಿಧ ರೀತಿಯ ಗಂಭೀರ ಸಮಸ್ಯೆವುಳ್ಳವರು ಬೆಳಿಗ್ಗೆ 8ಕ್ಕೆ ಬಂದು ಆಸ್ಪತ್ರೆಯಲ್ಲಿ ಕಾದು ಕುಳಿತರೂ ಸಮರ್ಪಕ ಚಿಕಿತ್ಸೆ ದೊರಕಿಲ್ಲ ಎಂದು ರೋಗಿಗಳು ಸಚಿವರ ಬಳಿ ಅಸಹಾಯಕತೆಯನ್ನು ವ್ಯಕ್ತಪಡಿಸಿದರು. ಈ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್‍ ಅವರ ಗಮನಕ್ಕೆ ತಂದು ಈ ರೀತಿ ತುರ್ತು ಮತ್ತು ಗಂಭೀರ ಸಮಸ್ಯೆ ಇರುವ ರೋಗಿಗಳಿಗೆ ಆಸ್ಪತ್ರೆಯಲ್ಲಿ ಕಾಯುವಂತೆ ಮಾಡಬಾರದು. ತಕ್ಷಣವೇ ಚಿಕಿತ್ಸೆ ನೀಡಬೇಕು. ಹಾಗೂ ಈ ರೀತಿ ರೋಗಿಗಳಿಗೆ ಅನುಕೂಲ ಮಾಡದೇ ಇರುವ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವನ್ನು ಜರುಗಿಸಬೇಕು ಎಂದಿ ಸಚಿವರು ಸೂಚನೆ ನೀಡಿದರು.

‘ಜಿಲ್ಲಾ ಆಸ್ಪತ್ರೆಯಲ್ಲಿ ಕೆಲವು ನ್ಯೂನತೆಗಳು ಕಂಡು ಬಂದಿವೆ. ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಯ ನೆರವಿಗಾಗಿ ಧಾವಿಸುತ್ತಿದ್ದು ಅವರಿಗೆ ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಅವ್ಯವಸ್ಥೆ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ’ ಎಂದು ಸುದ್ದಿಗಾರರಿಗೆ ಬೈರತಿ ಬಸವರಾಜ ತಿಳಿಸಿದರು.

ಕೋವಿಡ್ ರೋಗಿಗಳನ್ನು ನೋಡಿಕೊಳ್ಳಲು ಮನೆಯ ಇತರೆ ಸದಸ್ಯರು ಇರುವ ಅಗತ್ಯವಿಲ್ಲ. ವೈದ್ಯರು ಮತ್ತು ಶುಶ್ರೂಷಕರು ಅವರ ಸಂಪೂರ್ಣ ಜವಾಬ್ದಾರಿ ನಿರ್ವಹಿಸುತ್ತಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್‌, ಔಷಧ ಮತ್ತು ಲಸಿಕೆ ಸಮಸ್ಯೆ ಉಂಟಾಗಿಲ್ಲ ಎಂದು ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು