ಭಾನುವಾರ, ಜುಲೈ 3, 2022
25 °C

ತರಳಬಾಳು ಸೇವಾ ಸಮಿತಿ ಕೇಂದ್ರಕ್ಕೆ ಸಚಿವರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ತರಳಬಾಳು ಸೇವಾ ಸಮಿತಿಗೆ ಭೇಟಿ ನೀಡಿ ಅಲ್ಲಿಯ ಅಡುಗೆ ಮನೆ ಹಾಗೂ ತಯಾರಿಸಲಾಗುತ್ತಿದ್ದ ಆಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಪರಿಶೀಲಿಸಿದರು.

ಸಿರಿಗೆರೆ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ತರಳಬಾಳು ಸೇವಾ ಸಮಿತಿ ಹಾಗೂ ಶಿವಸೈನ್ಯ ಯುವಕ ಸಂಘದ ಸದಸ್ಯರು ಚಿಗಟೇರಿ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಾಗೂ ಆಸ್ಪತ್ರೆಯ ಕೊರೊನಾ ರೋಗಿಗಳಿಗೆ ಪ್ರತಿ ದಿನ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಗುಣಮಟ್ಟದ ಉಪಹಾರ ವ್ಯವಸ್ಥೆಯನ್ನು ಕಲ್ಪಿಸಿ, ರೋಗಿಗಳಿಗೆ ಮನೋಸ್ಥೈರ್ಯ ತುಂಬುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಜಿಲ್ಲಾ ಆಸ್ಪತ್ರೆಗೆ ಭೇಟಿ: ಚಿಗಟೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಸೇವಾ ಭಾರತಿ ಟ್ರಸ್ಟ್ ಅಡಿಯಲ್ಲಿ ಕೋವಿಡ್ ರೋಗಿಗಳನ್ನು ನೋಡಿಕೊಳ್ಳುವವರನ್ನು ಸಚಿವರು ಭೇಟಿ ಮಾಡಿದರು. ಅಗತ್ಯ ಸವಲತ್ತುಗಳು ಸಿಗುತ್ತಿದೆಯೇ ಎಂದು ಕೇಳಿ ಮಾಹಿತಿ ಪಡೆದರು.

ಲಸಿಕಾ ಕೇಂದ್ರಕ್ಕೆ ಭೇಟಿ: ನಗರದ ನಿಟುವಳ್ಳಿಯ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಬೈರತಿ ಬಸವರಾಜ ಪರಿಶೀಲನೆ ನಡೆಸಿದರು. ಲಸಿಕೆ ಫಲಾನುಭವಿಗಳ ಕುಶಲೋಪರಿ ವಿಚಾರಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಂ.ಪಿ. ರೇಣುಕಾಚಾರ್ಯ, ಮೇಯರ್‌ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸಿಇಒ ಡಾ. ವಿಜಯಮಹಾಂತೇಶ್, ಡಿಎಚ್‍ಒ ಡಾ.ನಾಗರಾಜ್, ಜಿಲ್ಲಾ ಸರ್ಜನ್‌ ಡಾ. ಜಯಪ್ರಕಾಶ್‌, ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ತಹಶೀಲ್ದಾರ್ ಗಿರೀಶ್ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು