ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಷನ್ ಇಂದ್ರಧನುಷ್ ಅಭಿಯಾನಕ್ಕೆ ಚಾಲನೆ

Published 7 ಆಗಸ್ಟ್ 2023, 16:59 IST
Last Updated 7 ಆಗಸ್ಟ್ 2023, 16:59 IST
ಅಕ್ಷರ ಗಾತ್ರ

ದಾವಣಗೆರೆ: ತೀವ್ರಗೊಂಡ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಗೃಹ ಕಚೇರಿಯಲ್ಲಿ ಸೋಮವಾರ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಮಿಷನ್ ಇಂದ್ರಧನುಷ್ ಲಸಿಕೆಯನ್ನು ಆಗಸ್ಟ್ 12ರವರೆಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳಲ್ಲಿ ಹಾಕಲಾಗುತ್ತದೆ. ಗರ್ಭಧಾರಣೆ ಸಮಯದಿಂದ ಮಗು ಹುಟ್ಟಿದಾಗ ಮತ್ತು ನಂತರದಲ್ಲಿ ಮಗುವಿಗೆ ಸಿಗಬೇಕಾದ ಲಸಿಕೆ ಸಿಗದಿದ್ದಲ್ಲಿ ಅಂತಹ 5 ವರ್ಷದೊಳಗಿನ ಮಗುವಿಗೆ ಇಂದ್ರಧನುಷ್ ಲಸಿಕೆ ಹಾಕಲಾಗುತ್ತದೆ.

‘ಜಿಲ್ಲೆಯಲ್ಲಿ ಇಂದ್ರಧನುಷ್ ಲಸಿಕೆಗೆ 710 ಗರ್ಭಿಣಿಯರು, 2 ವರ್ಷದವರೆಗಿನ 3,154 ಮಕ್ಕಳು ಮತ್ತು 2ರಿಂದ 5 ವರ್ಷದ 170 ಮಕ್ಕಳನ್ನು ಗುರುತಿಸಲಾಗಿದೆ. ಆಗಸ್ಟ್ 12ರವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಯಾರು ಲಸಿಕೆಗಳಿಂದ ಹೊರಗಿದ್ದಾರೆ, ಅವರು ಕಡ್ಡಾಯವಾಗಿ ಇಂದ್ರಧನುಷ್ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ ತಿಳಿಸಿದರು.  

ಎರಡನೇ ಹಂತದಲ್ಲಿ ಸೆಪ್ಟೆಂಬರ್ 11ರಿಂದ 16ರವರೆಗೆ ಮತ್ತು ಮೂರನೇ ಹಂತ ಅಕ್ಟೋಬರ್ 19ರಿಂದ 14ರವರೆಗೆ ಸಾರ್ವತ್ರಿಕ ಲಸಿಕಾ ನಡೆಯಲಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಕರಾಧ್ಯ, ತಾಲ್ಲೂಕು ಆರೋಗ್ಯಾಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Cut-off box - ‘ಲಸಿಕೆ ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು’ ದಾವಣಗೆರೆ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು. ಇದು ಸರ್ಕಾರದ ನೂತನ ಹೆಜ್ಜೆಯಾಗಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು. ಆವರಗೊಳ್ಳದ ಉಪಕೇಂದ್ರದಲ್ಲಿ ಇಂದ್ರ ಧನುಷ್ ಅಭಿಯಾನ ಮತ್ತು ಸ್ತನ್ಯಪಾನ ಸಪ್ತಾಹ ಚುಚ್ಚುಮದ್ದು ಕಾರ್ಯಕ್ರಮ ಕುರಿತು ಮಾತನಾಡಿದರು. ಇಂದ್ರಧನುಷ್ ಅಭಿಯಾನಕ್ಕೆ ಇಂದೇ ಕೈ ಜೋಡಿಸಿ ಪ್ರಾಣ ಉಳಿಸುವ ಲಸಿಕೆಗಳನ್ನು ಎಲ್ಲಾ ಮಕ್ಕಳಿಗೆ ಕೊಡಿಸಿ. ಸಾರ್ವತ್ರಿಕ ಲಸಿಕಾಕರಣದಲ್ಲಿ ಮುಖ್ಯವಾಗಿ ತಾಯಂದಿರಿಗೆ ತಿಳಿದಿರಬೇಕಾದ ನಾಲ್ಕು ಮಾಹಿತಿಗಳನ್ನು ತಿಳಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಇಮಾಂಬಿ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ಸಾರ್ವತ್ರಿಕ ಲಸಿಕಾಕರಣದಲ್ಲಿ ಡಿಜಿಟಲ್ ಪ್ರಮಾಣ ಪತ್ರವನ್ನು ಮಗುವಿನ ತಾಯಿಗೆ ನೀಡುವುದರೊಂದಿಗೆ ಯು–ವಿನ್ ತಂತ್ರಾಂಶದ ಬಗ್ಗೆ ಮಾಹಿತಿ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT