ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ನೌಕರರು ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿ: ಶಾಸಕ ಶಾಂತನಗೌಡ ಸಲಹೆ

Published 22 ಜೂನ್ 2024, 14:33 IST
Last Updated 22 ಜೂನ್ 2024, 14:33 IST
ಅಕ್ಷರ ಗಾತ್ರ

ನ್ಯಾಮತಿ: ‘ಸರ್ಕಾರ ನೌಕರರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇಲಾಖೆಗಳಿಂದ ಆಗುವ ಕೆಲಸದ ಸಲುವಾಗಿ ನಿಮ್ಮ ಬಳಿ ಬರುವ ಸಾರ್ವಜನಿಕರಿಗೆ ಪ್ರಮಾಣಿಕವಾಗಿ ಕೆಲಸ ಮಾಡಿಕೊಡಿ’ ಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.

ಪಟ್ಟಣದಲ್ಲಿ ಶನಿವಾರ ನ್ಯಾಮತಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಾರದೊಳಗೆ ಮಳೆ ಬಾರದಿದ್ದರೆ ರೈತರು ಬಹಳ ಸಂಕಷ್ಟಕ್ಕೆ ಸಿಲುಕುತ್ತಾರೆ. ದೇವರ ದಯೆಯಿಂದ ಮಳೆ ಬರಲಿ ಎಂದು ಎಲ್ಲರೂ ಪ್ರಾರ್ಥಿಸೋಣ. ಇಂತಹ ಸಮಯದಲ್ಲಿ ರೈತರ ಬಗ್ಗೆ ನೌಕರರು ವಿಶೇಷ ಕಾಳಜಿ ವಹಿಸಬೇಕು’ ಎಂದು ಹೇಳಿದರು. 

‘ನೌಕರರ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ನೌಕರರ ಸಂಘದವರು ಮನವಿ ಮಾಡಿದ್ದೀರಿ. ನಾನು ₹ 25 ಲಕ್ಷ ನೀಡುತ್ತೇನೆ. ಉಳಿದಂತೆ ಎಂಎಲ್‌ಸಿ ಅನುದಾನ, ರಾಜ್ಯ ಮತ್ತು ಜಿಲ್ಲಾ ನೌಕರರ ಸಂಘದಿಂದ ಹಾಗೂ ತಾಲ್ಲೂಕಿನ ಪ್ರತಿ ನೌಕರರಿಂದ ದೇಣಿಗೆ ಸಂಗ್ರಹಿಸಿ ಭವನ ನಿರ್ಮಾಣಕ್ಕೆ ಮುಂದಾಗಿ’ ಎಂದು ಸಲಹೆ ನೀಡಿದರು.

ನಿಕಟಪೂರ್ವ ಅಧ್ಯಕ್ಷ ಎಂ.ಬಿ.ನಿಂಗಪ್ಪ ಅವರಿಂದ ನೂತನ ಅಧ್ಯಕ್ಷ ಎಸ್.ಸಂತೋಷ, ನಿಕಟಪೂರ್ವ ರಾಜ್ಯ ಪರಿಷತ್‌ ಸದಸ್ಯ ಸುಧೀರ ಅವರಿಂದ ವಿಶ್ವನಾಥ ಅಧಿಕಾರ ಸ್ವೀಕರಿಸಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಉಪ ವಿಭಾಗಾಧಿಕಾರಿ ವಿ.ಅಭಿಷೇಕ, ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಎಸ್.ಒಡೇನಪುರ, ಗೌರವಾಧ್ಯಕ್ಷ ಬಿ.ಪಾಲಾಕ್ಷಿ, ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ಹೊನ್ನಾಳಿ ಘಟಕದ ಅಧ್ಯಕ್ಷ ಪಾಟೀಲ, ಬಿಇಒ ಎಂ. ತಿಪ್ಪೇಶಪ್ಪ, ಅಕ್ಷರ ದಾಸೋಹ ರುದ್ರಪ್ಪ, ಬಿಸಿಎಂ ಅಧಿಕಾರಿ ಟಿ.ಎಂ.ಮೃತ್ಯುಂಜಯಸ್ವಾಮಿ, ಸಮಾಜ ಕಲ್ಯಾಣಾಧಿಕಾರಿ ಎಚ್.ಎಲ್.ಉಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಾಮ, ತಾಲ್ಲೂಕು ಘಟಕದ ಅಧ್ಯಕ್ಷೆ ಸುಧಾ, ಎಸ್.ಆರ್.ಗಿರಿಜಮ್ಮ, ಆಂಜನೇಯ,ಶಿವಪದ್ಮ ಕೆ. ಕೆಂಚಮ್ಮ, ಜಿ.ರಾಘವೇಂದ್ರ, ಜಿ.ಬಿ.ವಿಜಯಕುಮಾರ, ನ್ಯಾಮತಿ ನಾಗರಾಜ,ಟಿ.ಎಲ್.ಜಗದೀಶ, ಡಿ.ಎಂ.ಹಾಲಾರಾಧ್ಯ, ಸಿದ್ದಪ್ಪ ಜಿಗಣಪ್ಪನವರ, ಎಂ.ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT