ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್

Published 26 ಜೂನ್ 2024, 14:49 IST
Last Updated 26 ಜೂನ್ 2024, 14:49 IST
ಅಕ್ಷರ ಗಾತ್ರ

ದಾವಣಗೆರೆ: ‘ಈಗಾಗಲೇ ಚುನಾವಣೆ ಮುಗಿದಿದ್ದು, ಉಪಮುಖ್ಯಮಂತ್ರಿ ಮಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಡಿಸಿಎಂ ಮಾಡುವುದಾದರೆ ಡಿ.ಕೆ.ಶಿವಕುಮಾರ್‌ ಅವರನ್ನು ಮೊದಲು ಮುಖ್ಯಮಂತ್ರಿ ಮಾಡಲಿ. ಆ ಬಳಿಕ 5 ಜನರನ್ನು ಡಿಸಿಎಂ ಮಾಡಲಿ’ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪಕ್ಷ ಸಂಘಟನೆ ಕೆಲಸವನ್ನು ಗುರುತಿಸಿ ಡಿ.ಕೆ.ಶಿವಕುಮಾರ್‌ ಅವರನ್ನು ಉಪ ಮುಖ್ಯಮಂತ್ರಿಯನ್ನು ಮಾಡಲಾಗಿದೆ ಹೊರತು, ಯಾವುದೇ ಜಾತಿ ಆಧಾರದ ಮೇಲೆ ಅಲ್ಲ’ ಎಂದು ಹೇಳಿದರು.

‘ಎಲ್ಲ ಸಮುದಾಯಗಳೂ ನಮಗೆ ಮತ ಹಾಕಿವೆ. ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಿದ ಬಳಿಕ, ಎಲ್ಲ ಜಾತಿಗಳಿಗೂ ಡಿಸಿಎಂ ಸ್ಥಾನ ನೀಡಲಿ. ಡಿಸಿಎಂ ವಿಚಾರದ ಬಗ್ಗೆ ಮಾತನಾಡದಂತೆ ಪಕ್ಷದ ವರಿಷ್ಠರು ಹೇಳಿದ್ದಾರೆ. ಆದರೂ, ಈ ಬಗ್ಗೆ ನಾಯಕರು ಮಾತನಾಡುತ್ತಿದ್ದು, ನೂತನ ಶಾಸಕರಾದ ನಾವು ಅದನ್ನು ಅನುಸರಿಸಬೇಕಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT