ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪ್ರವಾಸ: ಕಾಂಗ್ರೆಸ್‌ನಿಂದ ಹೆಚ್ಚು ಜಾಹೀರಾತು-ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ
Published 25 ಏಪ್ರಿಲ್ 2024, 14:43 IST
Last Updated 25 ಏಪ್ರಿಲ್ 2024, 14:43 IST
ಅಕ್ಷರ ಗಾತ್ರ

ದಾವಣಗೆರೆ: ‘ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಹೆಚ್ಚುಹೆಚ್ಚು ಪ್ರವಾಸ ಮಾಡುತ್ತಿದ್ದಂತೆಯೇ ಕಾಂಗ್ರೆಸ್‌ನವರಿಗೆ ಗೆಲುವಿನ ಆತ್ಮವಿಶ್ವಾಸ ಕುಗ್ಗುತ್ತಿದೆ. ಇದರಿಂದಾಗಿಯೇ ಹೆಚ್ಚಾಗಿ ಜಾಹೀರಾತುಗಳನ್ನು ಕೊಡುತ್ತಿದ್ದಾರೆ. ಪ್ರಧಾನಿ ಜನಪ್ರಿಯತೆ ಎದುರು ರಾಜ್ಯದಲ್ಲಿ ಕಾಂಗ್ರೆಸ್‌ ಮಂಕಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

‘ಪಿತ್ರಾರ್ಜಿತ ಆಸ್ತಿ ತೆರಿಗೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಅಲ್ಪಸಂಖ್ಯಾತರನ್ನು ಓಲೈಸುವ ರಾಜಕಾರಣದ ಮುಂದಿನ ಹಂತವಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆಸ್ತಿಯ ಸಮಾನ ಹಂಚಿಕೆಯ ಉದ್ದೇಶ  ಇತ್ತು. ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ರಾಹುಲ್‌ಗಾಂಧಿ, ಕಾಂಗ್ರೆಸ್ ಮುಖಂಡರ ಮನಸ್ಸಿನಲ್ಲಿ ಇರುವುದನ್ನು ಸ್ಯಾಮ್ ಪಿತ್ರೋಡಾ ಮೂಲಕ ಹೇಳಿಸುತ್ತಿದ್ದಾರೆ’ ಎಂದು ಸುದ್ದಿಗಾರರೆದುರು ದೂರಿದರು.

‘ಈ ವಿಚಾರವಾಗಿ ಚರ್ಚೆಗಳು ನಡೆಯುತ್ತಿದ್ದು, ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಬೇಕು ಎನ್ನುವ ಪಿತೂರಿಯಿಂದ ಮುಂದಿನ ದಿನಗಳಲ್ಲಿ ಅರಾಜಕತೆ ಸೃಷ್ಟಿಯಾಗಬಹುದು. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಆದರೆ, ಅಲ್ಪಸಂಖ್ಯಾತರನ್ನು ಖುಷಿಪಡಿಸಲು ಕಾಂಗ್ರೆಸ್ ಇತರೆ ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡುವುದು ಎಷ್ಟು ಸರಿ?’ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT