ಸೋಮವಾರ, ಸೆಪ್ಟೆಂಬರ್ 27, 2021
22 °C

ಯಡಿಯೂರಪ್ಪರನ್ನು ಹಿಂದೆ ಸರಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ: ಶ್ರೀಶೈಲ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ರಾಜ್ಯದ ಜನಾಭಿಮತ ಯಡಿಯೂರಪ್ಪ ಅವರ ಪರ ಇದ್ದು, ಚುನಾವಣೆಗಳಲ್ಲಿ ಅವರನ್ನು ಬೆಂಬಲಿಸಿದ್ದಾರೆ. ವರಿಷ್ಠರು ಅವರನ್ನು ಚೆನ್ನಾಗಿ ನಡೆಸಿಕೊಳ್ಳಬೇಕು. ಅವರು ಹಿಂದೆ ಸರಿದರೆ ಅಥವಾ ಸರಿಸುವ ಪ್ರಕ್ರಿಯೆ ಆದರೆ ಪಕ್ಷಕ್ಕೆ ತೊಂದರೆ ಕಟ್ಟಿಟ್ಟ ಬುತ್ತಿ’ ಎಂದು ಶ್ರೀಶೈಲ ಮಠದ ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ‌ ಎಚ್ಚರಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಲ್ಲಾ ಜನಾಂಗದವರಿಗೆ ನ್ಯಾಯ ದೊರಕಿಸಿಕೊಟ್ಟಿರುವ ಕೀರ್ತಿ ಯಡಿಯೂರಪ್ಪ ಅವರಿಗಿದ್ದು, ಅವರಿಗೆ ಏನೇ ಆದರೂ ಎಲ್ಲಾ ಜನಾಂಗದವರೂ ಅವರ ಪರವಾಗಿ ನಿಲ್ಲುತ್ತಾರೆ. ಬೇರೆ ಪಕ್ಷದ ಶಾಮನೂರು ಶಿವಶಂಕರಪ್ಪ ಅವರೂ ಬೆಂಬಲ ಸೂಚಿಸಿದ್ದಾರೆ. ಬಿಎಸ್‌ವೈ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರು. ಜನರೂ ಅವರನ್ನು ಪ್ರಶ್ನಾತೀತ ನಾಯಕ ಎಂಬ ವಿಶ್ವಾಸದಲ್ಲಿ ಬೆಂಬಲಿಸಿದ್ದಾರೆ’ ಎಂದು ಹೇಳಿದರು.

ವೀರಶೈವ ಮಹಾಸಭೆ, ಪಂಚಪೀಠಗಳು ಕೂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರವಾಗಿ ನಿಲ್ಲಲಿದ್ದು, ಶ್ರೀಶೈಲ ಮಠವೂ ಅವರ ಬೆನ್ನಿಗೆ ಇದೆ ಎಂದು ಹೇಳಿದರು.

‘ರಾಜ್ಯದ ಬೆಳವಣಿಗೆಗಳ ಬಗ್ಗೆ ಸಮಾನ ಪೀಠಾಧ್ಯಕ್ಷರ ಜೊತೆ ಮಾತುಕತೆ ನಡೆಸುತ್ತೇವೆ. ಬಿ.ಎಸ್.ವೈ ಮುಂದುವರಿದರೆ ಪಕ್ಷಕ್ಕೆ ರಾಜ್ಯಕ್ಕೆ ಒಳ್ಳೆಯದು. ಬುಧವಾರ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು