ಹೊನ್ನಾಳಿ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ತಾಕತ್ತಿದ್ದರೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಿ’ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸವಾಲು ಹಾಕಿದರು.

ತಾಲ್ಲೂಕಿನ ಹೊಳೆಹರಹಳ್ಳಿಯಲ್ಲಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಅವರು ಯತ್ನಾಳ್ ಹೇಳಿಕೆ ವಿರುದ್ಧ ಕೆಂಡಕಾರಿದರು.

‘ಯಡಿಯೂರಪ್ಪ ಅವರು ಮಕ್ಕಳನ್ನು ಇಟ್ಟುಕೊಂಡು ಭ್ರಷ್ಟಾಚಾರ ಮಾಡು ತ್ತಾರೆ ಎಂದು ಆರೋಪ ಮಾಡುತ್ತೀದ್ದೀಯಲ್ಲ, ನೀನು ನಿನ್ನ ಮಗನನ್ನು ಇಟ್ಟು ಕೊಂಡು ಕೆಲಸ ಮಾಡುತ್ತೀಯಲ್ಲ, ಯತ್ನಾಳ್... ಹಾಗಾದರೆ ನೀನೂ ಭ್ರಷ್ಟನೇ’ ಎಂದು ಏಕವಚನದಲ್ಲೇ ಪ್ರಶ್ನಿಸಿದರು. ‘ನಿನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದಾಗ ಪುನಃ ಪಕ್ಷಕ್ಕೆ ಕರೆ ತಂದವರು ಇದೇ ಯಡಿಯೂರಪ್ಪ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.