ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ (25) ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಗುರುವಾರ ಕೊಳೆತ ಸ್ಥಿತಿಯಲ್ಲಿ ಮೃತಪದೇಹ ಪತ್ತೆಯಾಗಿದೆ.

ಹೊನ್ನಾಳಿ ನ್ಯಾಮತಿ ಮಧ್ಯೆ ಸೊರಟೂರು ಬಳಿ ತುಂಗಾ ಮೇಲ್ದಂಡೆಯ ಕಾಲುವೆಯಲ್ಲಿ ಕಾರು ಪತ್ತೆಯಾಗಿತ್ತು. ಕಾರಿನ ಹಿಂಬದಿ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಲ್ಲಿ ಒಬ್ಬರೇ ಇದ್ದು, ಹಿಂಬದಿ ಸೀಟಿಗೆ ಹೇಗೆ ಬಂದರು ಎಂಬ ಪ್ರಶ್ನೆ ಮೂಡಿದೆ. ಅಪಘಾತವೇ? ಕೊಲೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.

ಭಾನುವಾರ ಸಂಜೆ 7.30ಕ್ಕೆ ಮನೆಯಿಂದ ಕಾರ್ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಟ ನಡೆಸಿದ ಬಳಿಕ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.