ಸಾಸ್ವೆಹಳ್ಳಿ: ‘ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಮಾಡದೆ, ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲಾಗದೆ ಸುಳ್ಳು ಆರೋಪಗಳನ್ನು ಮಾಡುತ್ತಿದೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಉದ್ಯೋಗ ಖಾತ್ರಿ ಯೋಜನೆ ಕುರಿತ ಜನ ಜಾಗೃತಿ ಅಭಿಯಾನ’ದಲ್ಲಿ ಮಾತನಾಡಿದರು.

‘ಹಿಂದೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿತ್ತು. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಿಜಿ ರಾಮ್ ಜಿ ಯೋಜನೆಯನ್ನು ತಂದಿದೆಯೇ ಹೊರತು ಮಹಾತ್ಮ ಗಾಂಧೀಜಿಗೆ ಅಪಮಾನ ಮಾಡುವ ಉದ್ದೇಶ ಇದರಲ್ಲಿಲ್ಲ. ಈ ಯೋಜನೆಯಡಿ ಮಾನವ ಕೂಲಿ ದಿನಗಳನ್ನು 125ಕ್ಕೆ ಹಾಗೂ ದಿನಗೂಲಿಯನ್ನು ₹3 79ಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.

‘ಅಬಕಾರಿ ಇಲಾಖೆಯಲ್ಲಿ ₹ 6,000 ಕೋಟಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದರ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ಸಾಸ್ವೆಹಳ್ಳಿಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.